ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್‍ಐ, ಎಸ್‍ಡಿಪಿಐ ಮುಖಂಡರ ಮನೆ ಮೇಲೆ ದಾಳಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವೆಡೆ ಪಿಎಫ್‍ಐ, ಎಸ್ಡಿಪಿಐ ಮುಖಂಡರ ಮನೆಗಳ ಮೇಲೆ ಎನ್‍ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್‍ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್‍ಐಎ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ ಎಂಬವರನ್ನು ಎನ್‍ಐಎ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

Related Posts

Leave a Reply

Your email address will not be published.