HomeFresh Newsಬೆಳ್ಳಾರೆ : ಮೇ.20ರಂದು ’ಸುಸ್ಥಿರ ಕೃಷಿಗಾಗಿ’ ರೈತ ಸಂಗೋಷ್ಟಿ ಕಾರ್ಯಕ್ರಮ

ಬೆಳ್ಳಾರೆ : ಮೇ.20ರಂದು ’ಸುಸ್ಥಿರ ಕೃಷಿಗಾಗಿ’ ರೈತ ಸಂಗೋಷ್ಟಿ ಕಾರ್ಯಕ್ರಮ

ಬೆಳ್ಳಾರೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ’ಸುಸ್ಥಿರ ಕೃಷಿಗಾಗಿ’ ರೈತ ಸಂಗೋಷ್ಟಿ ಎಂಬ ಕಾರ್ಯಕ್ರಮವು ಮೇ.20ರಂದು ಬೆಳಿಗ್ಗೆ 9.30ಕ್ಕೆ ಬೆಳ್ಳಾರೆಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಇಂದೋರ್‌ನ ಶ್ರೀ ಸಿದ್ಧಿ ಅಗ್ರಿ ಕೋ ಪ್ರೈವೇಟ್ ಲಿಮಿಟೆಡ್‌ನ ಪೆರುವೋಡಿ ನಾರಾಯಣ ಭಟ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ.ಡಿ ಅವರು ಉಪಸ್ಥಿತರಿರುವರು. ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ
ರಾಮಕೃಷ್ಣ ಭಟ್ ಕುರುಂಬುಡೇಲು ಅವರು ಸಭಾಧ್ಯಕ್ಷತೆ ವಹಿಸಲಿದ್ದಾರೆ.

ಎಲ್ಲಾ ರೈತ ಸದಸ್ಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ ವಿನಂತಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments