ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಹಸ್ತಾಂತರ
ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಅನ್ನು ದಿನಾಂಕ 05.01.2026 ರಂದು ಊರಿನ ಗಣ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್. ರೈ ಅವರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಶ್ರೀಮತಿ ವೀಣಾ ಮೂಡಯಿತೋಟ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಸುಳ್ಯ ತಾಲ್ಲೂಕಿನ 1812ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ರಾಜೀವಿ ರೈ (ಬೆಳ್ಳಾರೆ) ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರಾದ ಶ್ರೀ ಸುರೇಶ್ ಕುಮಾರ್ ಶೆಟ್ಟಿ, ಶ್ರೀ ಲಕ್ಷ್ಮಿ ವೆಂಕಟ್ರಮಣ ದೇವಸ್ಥಾನದ ಮೊಕ್ತೇಸರಾದ ಶ್ರೀ ನಾರಾಯಣ ಶ್ಯಾನ್ ಬೋಗ್, ಪೆರುವಾಜೆ ಶ್ರೀ ಜಲದುರ್ಗ ದೇವಸ್ಥಾನದ ಮೊಕ್ತೇಸರಾದ ಶ್ರೀ ಪದ್ಮನಾಭ ಶೆಟ್ಟಿ, ಬೆಳ್ಳಾರೆ ಸೇವಾಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ರಾಮಕೃಷ್ಣ ಭಟ್, ಬೆಳ್ಳಾರೆ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪನ್ನೆ, ಬೆಳ್ಳಾರೆ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ ರೈ, ಉಪಾಧ್ಯಕ್ಷರಾದ ಶ್ರೀಮತಿ ನಂದಿನಿ, ವಲಯ ಮೇಲ್ವಿಚಾರಕರಾದ ಶ್ರೀ ತೀರ್ಥರಾಮ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರು, ಊರಿನ ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಕೊಡುಗೆಯು ಸಾರ್ವಜನಿಕರಿಗೆ ಬಹಳ ಉಪಯುಕ್ತವಾಗಿದ್ದು, ಗ್ರಾಮ ಪಂಚಾಯತ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.


















