ಬೆಳ್ಳಾರೆ: ಮಹಿಳೆಯ ಶವ ಪತ್ತೆ- ಕೊಲೆ ಶಂಕೆ

ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು ಕೊಳೆ ಶಂಕೆ ವ್ಯಕ್ತವಾಗಿದೆ.
ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಸೋಮವಾರ ಮಹಿಳೆಯ ಶವ ಪತ್ತೆಯಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಮೃತ ಮಹಿಳೆಯನ್ನು ಪಾಟಾಜೆಯ ನಳಿನಿ ಎಂದು ಗುರುತಿಸಲಾಗಿದೆ. ಪೊಲೀಸ್ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
