ಬೆಳ್ತಂಗಡಿ ಕ್ಷೇತ್ರದ ಶಾಸಕರು ಪ್ರಚಾರದ ಜೊತೆಗೆ ಹಣ ಹಂಚುತ್ತಿದ್ದಾರೆ : ಮಾಜಿ ಶಾಸಕ ವಸಂತ ಬಂಗೇರ ಅವರಿಂದ ಗಂಭೀರ ಆರೋಪ
ಬೆಳ್ತಂಗಡಿ ಕ್ಷೇತ್ರದ ಶಾಸಕರು ಬಿರುಸಿನ ಪ್ರಚಾರ ಕಾರ್ಯವನ್ನು ಮಾಡುತ್ತಿದ್ದಾರೆ. ಅದರ ಜೊತೆಗೆ ಹಣ ಹಂಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ವಸಂತ ಬಂಗೇರ ಅವರು ಆರೋಪಿಸಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಗಂಭೀರ ಆರೋಪ ಮಾಡಿದರು. ಅವರು ಪ್ರಚಾರ ಮಾಡುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನ ಹಿಂದೆ 4 ಕಾರುಗಳು ಬೆಂಗಾವಲಾಗಿ ಹೋಗುತ್ತಿದ್ದು ಅದರಲ್ಲಿ ಒಂದು ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದು ಇದನ್ನು ನಾನು ಕಣ್ಣಾರೆ ಕಂಡಿದ್ದೇನೆ ಎಂದು ಹೇಳಿದರು. ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮನೋಹರ ಕುಮಾರ್, ಚಂದು ಎಲ್, ಶೇಖರ್ ಕುಕ್ಕೇಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.