ಬೆಳ್ತಂಗಡಿ : ಪಡಂಗಡಿಯಲ್ಲಿ ಬಿಜೆಪಿ ಸಾರ್ವಜನಿಕ ಪ್ರಚಾರ ಸಭೆ

ವಿಧಾನಸಭಾ ಚುನಾವಣೆಯ ಹಿನ್ನೆಲೆ ಪಡಂಗಡಿಯಲ್ಲಿ ನಡೆದ ಮೊದಲ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಹರೀಶ ಪೂಂಜಾ ಅವರು ಭಾಗಿಯಾಗಿ ಚಾಲನೆಯನ್ನು ನೀಡಿದರು. ಸಾರ್ವಜನಿಕ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ ಬೆಳ್ತಂಗಡಿ ಕ್ಷೇತ್ರ ಈಗ ರಾಜ್ಯಕ್ಕೆ ಮಾದರಿಯಾಗಿ ನಿಂತಿದೆ, ಅಭಿವೃದ್ಧಿಯ ಮಹಾಪರ್ವವೇ ನಡೆದಿದೆ. ಬೆಳ್ತಂಗಡಿಯನ್ನು ಮತ್ತಷ್ಟು ಬೆಳಗಲು ಕ್ಷೇತ್ರದ ಜನತೆ ಮತ್ತೊಂದು ಬಾರಿ ಹರೀಶ ಪೂಂಜಾ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ಶಾಸಕ ಹರೀಶ್‍ಪೂಂಜಾ ಮಾತನಾಡಿ, ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು, ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನತೆಯ ಮುಂದಿಟ್ಟು, ಕ್ಷೇತ್ರದ ಜನರ ಸೇವೆ ಮಾಡಲು ಮತ್ತೊಂದು ಅವಕಾಶ ನೀಡುವಂತೆ ಕೋರಿಕೊಂಡರು ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಅಭ್ಯರ್ಥಿಪ್ರಮುಖ್ ಜಯಾನಂದ್ ಗೌಡ, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪಗೌಡ, ಮಂಡಲಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಪಾರ ಸಂಖ್ಯೆಯಲಿ ್ಲಕಾರ್ಯಕರ್ತರು ಉಪಸ್ಥಿತರಿದ್ದರು.
