ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಶರಣಬಸಪ್ಪ ದರ್ಶನಾಪುರ ಭೇಟಿ, ಪೂಜೆ ಸಲ್ಲಿಕೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಭೇಟಿ ನೀಡಿದರು. ಶ್ರೀ ಮಂಜುನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಶ್ರಾವಣ ಮಾಸದ ಶುಭ ಸೋಮವಾರದಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ಶ್ರೀ ಮಂಜುನಾಥ ದೇವರು ರಾಜ್ಯದ ಜನರಿಗೆ ಸುಭೀಕ್ಷೆಯನ್ನು ತರಲಿ ಎಂದರು.