ಬೆಳ್ತಂಗಡಿ: ಕಳೆಂಜ ಗ್ರಾಮದ ಅರಣ್ಯ ವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಪ್ರತಾಪ್ ಸಿಂಹ ನಾಯಕ್
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಅರಣ್ಯ ವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಿಂದೆ 2016ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಇರುವಾಗ ಪ್ರಸ್ತಾಪ ಸಲ್ಲಿಸಿದ್ದರು. ನಂತರ ಬಿಜೆಪಿ ಸರ್ಕಾರ ಬಂದ ನಂತರ ಕಾರ್ಯರೂಪಕ್ಕೆ ತಂದಿದ್ದೇವೆ. ಈಗ ಸಿದ್ದರಾಮಯ್ಯರ ಸರಕಾರ ಅದನ್ನು ಮುಂದುವರೆಸಿಕೊಡು ಹೋಗಬೇಕು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಯಂತ್ ಕೋಟ್ಯಾನ್ ಉಪಸ್ಥಿತರಿದ್ದರು.