ಬೆಳ್ತಂಗಡಿ : ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಹಲ್ಲೆ

ಬೆಳ್ತಂಗಡಿಯ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿಯವರ ಮೇಲೆ ಹಲ್ಲೆ ನಡೆದಿದ್ದು. ಹಲ್ಲೆಗೆ ಒಳಗಾದ ದಯಾನಂದ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಭೇಟಿ ಮಾಡಿ ಧೈರ್ಯ ತುಂಬಿದರು. ತಾಲೂಕಿನಲ್ಲಿ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕ್ಕೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
