ಬೆಳ್ತಂಗಡಿ : ತೋಟತ್ತಾಡಿ ; ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಬೆಳ್ತಂಗಡಿ. : ತೋಟತ್ತಾಡಿ ಬಿಜೆಪಿಯ ದುರಾಡಳಿತಕ್ಕೆ ಬೇಸಿತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಹರೀಶ್ ಗೌಡ ವಿಶ್ವನಾಥ್ ಗೌಡ ರವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಸಂಯೋಜಕರಾದ ಭಗೀರಥ ಜಿ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸಾಹುಲ್ ಹಮೀದ್. ನಮಿತಾ. ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಹಕೀಮ್ ಕೊಕ್ಕಡ.ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು…