ಬೆಳ್ತಂಗಡಿ: ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ ಸ್ಪಷ್ಟ ವಾತಾವರಣ ಸೃಷ್ಟಿಯಾಗುತ್ತಿದೆ. ಮಧ್ಯೆ ಬಿಜೆಪಿ ಯಶಸ್ಸು ನೋಡುತ್ತಿರುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಜೊತೆಗೆ ಕೈ ಜೋಡಿಸುತ್ತಿದ್ದಾರೆ.

ನೆರಿಯದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮತದಾರರು ಉಪಸ್ಥಿತರಿದ್ದು, ಶಾಸಕ ಹರೀಶ್ ಪೂಂಜಾ ಅವರ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ತತ್ವ ಸಿದ್ಧಾಂತಗಳನ್ನು  ಒಪ್ಪಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕೊಕ್ಕಡದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಕಳೆಂಜ ಗ್ರಾಮದ ಕೃಷ್ಣ ಕುಮಾರ್, ಗುರುನಾಥ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್ ಮುಖಂಡರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯತೀಶ್, ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಹಿರಿಯರಾದ ಸುಬ್ರಹ್ಮಣ್ಯ, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್, ಅನೀಶ್ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.