ವಕೀಲರ ಮೇಲಿನ ದೌರ್ಜನ್ಯ ಆರೋಪ : ಬೆಳ್ತಂಗಡಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ

ವಕೀಲರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ವಕೀಲರ ಸಂಘದವರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ.ಎಸ್. ಅವರು, ವಕೀಲರ ಮನೆಗೆ ಬಂದು ಪೊಲೀಸರು ಹಲ್ಲೆ ಮಾಡಿರುವುದು ಖಂಡನೀಯ, ಹಲ್ಲೆಗೈದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಲ್ಲದೆ ಪುಂಜಾಲಕಟ್ಟೆ ಲೀಸ್ ಉಪನಿರೀಕ್ಷಕರನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದೆ ಹೋದರೆ ಮುಂದಕ್ಕೆ ಉಗ್ರವಾದ ಹೋರಾಟ ಮಾಡುವುದಾಗಿ ಹೇಳಿದರು.
