ಬೆಳ್ತಂಗಡಿ : ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯ

ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದಲ್ಲಿರುವ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯವಾದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.

ಬೆಳ್ತಂಗಡಿ KSRTC ಬಸ್ ನಿಲ್ದಾಣದ ಬಳಿ ಇರುವ ವಾರ್ತಾ ಭವನ ಕಟ್ಟಡದ ಕೆಳ ಭಾಗ ಕಳೆದ ಒಂದು ವಾರದಿಂದ ಕುಸಿಯುತ್ತಿರುವ ಬಗ್ಗೆ ಪಟ್ಟಣ ಪಂಚಾಯತ್ ಗೆ ಮೌಖಿಕ ಮಾಹಿತಿ ನೀಡಲಾಗಿತ್ತು. ಆದರೆ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ. ನಿರಂತರ ಒತ್ತಡದಿಂದ ಇಂದು ಬೆಳಗ್ಗೆ ಪಟ್ಟಣ ಪಂಚಾಯತ್ ನಿಂದ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಟ್ಟಡಕ್ಕೆ ಅಳವಡಿಸಿದ ಕಬ್ಬಿಣದ ಶೀಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ. ಗಾಯಳುಗಳನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
