ಎಸ್ಸಿ,ಎಸ್ಟಿ ಕುಟುಂಬಗಳ ಕೃಷಿ ನೀರಿಗೆ ಸಮಸ್ಯೆಯಾಗಬಾರದು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ

ಬೆಳ್ತಂಗಡಿ ತಾಲೂಕಿನ ಎಲ್ಲಾ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಕುಟುಂಬಗಳು ಕೃಷಿ ನೀರಿಗೆ ಸಮಸ್ಯೆಯಾಗ ಬಾರದು ಎಂದು ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಹೇಳಿದರು.

ಅವರು ಬೆಳ್ತಂಗಡಿ ತಾಲೂಕಿನಾದ್ಯಂತ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಪಂಗಡ 25 ಮತ್ತು ಪರಿಶಿಷ್ಟ ಜಾತಿ 25 ಕುಟುಂಬಗಳಿಗೆ ಸುಮಾರು ಒಂದು ಕೋಟಿ 25 ಲಕ್ಷ ರೂಪಾಯಿ ಮೊತ್ತವನ್ನು ಕಾವೇರಿ ಜಲ ಅಭಿವೃದ್ದಿ ನಿಗಮ ಯೋಜನೆಯಡಿ ಕೊಳವೆ ಬಾವಿಗೆ ಪಂಪ್ ಅಳವಡಿಕೆ ಮತ್ತು ಪೈಪ್ ಲೈನಿಗೆ ಚಾಲನೆ ನೀಡಿ ಮಾತನಾಡಿದ ಅವರು ಕರ್ನಾಟಕ ಸರಕಾರದ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ಅವರ ವಿಶೇಷ ಅನುದಾನದಿಂದ ಸುಮಾರು 300 ಕೋಟಿ ರೂಪಾಯಿ ವೆಚ್ಚದಲ್ಲಿ 100 ಕ್ಕೂ ಹೆಚ್ಚು ಕುಟುಂಬಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗಿದೆ ಇದಕ್ಕಾಗಿ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್,ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.