ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಆ11 ರಂದು ನಡೆದಿದೆ.
ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಜಖಂಗೊಂಡಿದ್ದು, ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಮಡಂತ್ಯಾರು, ಪಾರೆಂಕಿ ಪಂಗಳ ನಿವಾಸಿ ಸೋಮನಾಥ (27) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

