HomeFresh Newsಬೆಳ್ತಂಗಡಿ ನೆರಿಯ ಗ್ರಾಮದಲ್ಲಿ ಸ್ಮಶಾನದ ಕೊರತೆ : ಮೃತ ದೇಹ ಇಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

ಬೆಳ್ತಂಗಡಿ ನೆರಿಯ ಗ್ರಾಮದಲ್ಲಿ ಸ್ಮಶಾನದ ಕೊರತೆ : ಮೃತ ದೇಹ ಇಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೆ ಶವ ಸಂಸ್ಕಾರಕ್ಕೆ ಸಮಸ್ಯೆ ಆಗುತಿದೆ. ತಕ್ಷಣ ಸ್ಮಶಾನದ ಜಾಗ ನಿಗದಿಗೊಳಿಸುವಂತೆ ಆಗ್ರಹಿಸಿ ಮೃತ ದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ. ಕಳೆದ ಹಲವಾರು ವರ್ಷಗಳಿಂದ ಸ್ಮಶಾನವಿಲ್ಲದೆ ಶವ ಸಂಸ್ಕಾರಕ್ಕಾಗಿ ಗ್ರಾಮಸ್ಥರು ಅಲೆದಾಡುವ ಸ್ಥಿತಿ ಇದ್ದರೂ ಯಾರೂ ಕೂಡ ಗ್ರಾಮಸ್ಥರ ಮನವಿಗೆ ಸ್ಪಂದಿಸುತ್ತಿಲ್ಲ ಸ್ಮಶಾನ ನಿಗದಿಗೊಳಿಸದೇ ಮೃತ ದೇಹದ ಅಂತಿಮ ಸಂಸ್ಕಾರ ಮಾಡುವುದಿಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡಿದರು. ನೆರಿಯ ಗ್ರಾಮದ ಜನತಾಕಾಲನಿ ನಿವಾಸಿ ಸಂಜೀವಗೌಡ ( 51ವ ) ರವರು ಮೃತ ಪಟ್ಟಿದ್ದು ಮೃತರ ಅಂತ್ಯ ಸಂಸ್ಕಾರ ನಡೆಸಲು ನೆರಿಯ ಗ್ರಾಮದಲ್ಲಿ ಸ್ಮಶಾನ ಇರದೇ ಇರುವುದರಿಂದ ನೆರಿಯ ಗ್ರಾಮ ಪಂಚಾಯತ್ ಎದುರುಗಡೆ ಅಂತ್ಯ ಸಂಸ್ಕಾರ ನಡೆಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ್ದಾರೆ.

belthangady smashana problem

ಈ ವೇಳೆಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ ನೀಡಿದಾಗ ಇವತ್ತೇ ಸ್ಮಶಾನಕ್ಕೆ ಜಾಗ ಗುರುತಿಸಿಕೊಡಬೇಕು ಅದೇ ಜಾಗದಲ್ಲಿ ಮೃತದೇಹದ ಅಂತ್ಯ ಸಂಸ್ಕಾರ ಮಾಡುವುದಾಗಿ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.ಈಗಾಗಲೇ ಇಟ್ಟಾಡಿ ಎಂಬಲ್ಲಿ ಸ್ಮಶಾನಕ್ಕಾಗಿ ಜಾಗ ಮೀಸಲಿರಿಸಿದ ಸ್ಥಳವನ್ನು ತಹಶೀಲ್ದಾರ್ ಹಾಗೂ ಅಧಿಕಾರಿಗಳು ಪರಿಶೀಲಿಸುವ ಸಂದರ್ಭ ಸ್ಥಳೀಯ ಕೆಲವರು ಆ ಜಾಗದಲ್ಲಿ ಸ್ಮಶಾನ ಮಾಡಲು ವಿರೋಧ ವ್ಯಕ್ತಪಡಿಸಿದರಲ್ಲದೇ ಯಾವುದೇ ಕಾರಣಕ್ಕೂ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ರಸ್ತೆಗೆ ಅಡ್ಡಲಾಗಿ ಕೂತಾಗ ಸ್ವಲ್ಪ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರು ಪಂಚಾಯತ್ ಮುಂಭಾಗದಲ್ಲಿ ಶವ ಸಂಸ್ಕಾರ ಮಾಡಲು ಮುಂದಾಗಿ ಪಂಚಾಯತ್ ಪಕ್ಕದಲ್ಲಿ ಸರ್ಕಾರಿ ಭೂಮಿ ಇದೆ ಅದನ್ನು ಸ್ಮಶಾನಕ್ಕೆ ಮೀಸಲಿರಿಸಿ ಎಂದು ತಹಶೀಲ್ದಾರ್ ಅವರನ್ನು ಒತ್ತಾಯಿಸಿದ್ದಾರೆ.

belthangady smashana problem

ಈ ವೇಳೆ ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಪಂಚಾಯತ್ ಬಳಿ ಇರುವ ಜಾಗವನ್ನು ಪರಿಶೀಲಿಸಿ ರುದ್ರಭೂಮಿ ಅಲ್ಲೆ ಮಾಡುವಂತೆ ಸೂಚಿಸಿದಾಗ ಗ್ರಾಮಸ್ಥರೆಲ್ಲ ಪ್ರತಿಭಟನೆಯನ್ನು ಹಿಂಪಡೆದು ಅದೇ ಜಾಗದಲ್ಲಿ ಸಂಜೀವ ಗೌಡ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲು ವ್ಯವಸ್ಥೆ ಮಾಡುವ ಮೂಲಕ ತಾರಕಕ್ಕೇರಿದ ನೆರಿಯ ಸ್ಮಶಾನದ ಪ್ರತಿಭಟನೆ ಸುಖಾಂತ್ಯಗೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments