HomeFresh Newsಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಶನಿವಾರ ರಾತ್ರಿ ಹೃದಯಾಘಾತದಿಂದ ಮಂಗಳೂರಿನ ಮನೆಯಲ್ಲಿ ನಿಧನರಾದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕ ರಾಗಿ ಸೇವೆ ಸಲ್ಲಿಸಿದ್ದರು.ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ಅವರು ನಿರ್ವಹಿಸಿದ್ದರು.ಪುಂಡು, ರಾಜವೇಶ, ನಾಟಕೀಯ ವೇಷಗಳಲ್ಲಿ ನುರಿತ ಕಲಾವಿದರಾಗಿದ್ದರು. ಹೃದಯ ಸಂಬಂಧಿ ಅನಾರೋಗ್ಯ ನಿಮಿತ್ತ ಕೆಲ ದಿನಗಳ ಹಿಂದಷ್ಟೇ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನಡೆದು ಚೇತರಿಸಿ ಮನೆಗೆ ಮರಳಿದ್ದರು ಎಂದು ತಿಳಿದು ಬಂದಿದೆ. ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments