ಬೆಂಗಳೂರು : ಇನಾಯತ್ ಆಲಿ ನೇತೃತ್ವದಲ್ಲಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ

ಭಾರತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಎಲ್ಲೆಡೆ ವಿಜ್ರಂಭಣೆಯಿಂದ ನಡೆದಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಗಸ್ಟ್ 15ರಂದು ಬೆಂಗಳೂರಿನಲ್ಲಿ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮುಲ್ಕಿ ಅವರ ನೇತೃತ್ವದಲ್ಲಿ ದ.ಕ. ಜಿಲ್ಲೆಯಿಂದ 15 ಬಸ್ಸು ಸಹಿತ ಇತರ ವಾಹನಗಳಲ್ಲಿ ಸಾವಿರಾರು ಕಾರ್ಯಕರ್ತರು ಬೆಂಗಳೂರಿಗೆ ತೆರಳಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಿದರು. ಪಕ್ಷದ ವಿವಿಧ ಸ್ತರದ ನಾಯಕರು ಈ ಸಂದರ್ಭ ಉಪಸ್ಥಿತರಿದ್ದು ಇನಾಯತ್ ಅಲಿ ಅವರ ಸಂಘಟನಾ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related Posts

Leave a Reply

Your email address will not be published.