ಬೆಂಗಳೂರು: ದ.ಕ, ಉಡುಪಿ ಜಿಲ್ಲೆಯ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ , ಅಧಿಕಾರಿಗಳ ಸಭೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲೆಯಲ್ಲಿನ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಇಂದು ವಿಧಾನಸೌಧದ ಕೊಠಡಿ ಸಂಖ್ಯೆ106ರಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು.

ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಕೆಂಪು ಕಲ್ಲು ಹಾಗೂ ಮರಳು ಗಣಿಗಾರಿಕೆಗೆ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
