ಬೆಂಗಳೂರು:3 ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್‍ಸರ್ ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೆಎಸ್‌ಆರ್ ನಿಲ್ದಾಣದಿಂದ ಪ್ರಧಾನಿ ಮೋದಿ ಅವರು ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಇಂದು ಬೆಳಿಗ್ಗೆ 11.30 ಕ್ಕೆ ಹಸಿರು ನಿಶಾನೆ ತೋರಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇದೇ ವೇಳೆ ಇವತ್ತಿನಿಂದ ಆರಂಭವಾದ ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಾತ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳಿಗೂ ಬೆಂಗಳೂರಿನಿಂದಲೇ ಹಸಿರು ನಿಶಾನೆ ತೋರಿದರು.
ಬೆಳಿಗ್ಗೆ 11.15 ಕ್ಕೆ ವಂದೇ ಭಾರತ ರೈಲು ಬೆಂಗಳೂರಿನಿಂದ–ಬೆಳಗಾವಿಗೆ ಉದ್ಘಾಟನಾರ್ಥ ಸಂಚಾರ ಆರಂಭಿಸಲಿದ್ದು ಆಗಸ್ಟ್ 11ರಿಂದ ಅಂದರೆ ನಾಳೆಯಿಂದ ನಿಯಮಿತ ಸಂಚಾರ ಆರಂಭಿಸಲಿದೆ.