ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಮಂಗಳೂರು: ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು.





ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿಯ ಸಹಯೋಗದೊಂದಿಗೆ ಇಂದು ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬೆಂಗರೆಯ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಎಲ್ಲರೂ ಬೆಳಗ್ಗಿನಂದಲೇ ತೊಡಗಿಕೊಂಡಿದ್ದರು. ಸಮಿತಿಯ ಪ್ರತಿಯೊಬ್ಬರು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದ್ದು, ಕಸ ಹೆಕ್ಕಿ ಕ್ಲೀನ್ ಮಾಡುವುದರ ಜೊತೆಗೆ ನೀರು ಹಾಕಿ ಗುಡಿಸಿ ಸ್ವಚ್ಛಗೊಳಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.