HomeFresh Newsಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ : ರಮನಾಥ ರೈ

ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ : ರಮನಾಥ ರೈ

BEST KARNATAKA BUDGET HAS EVER SEEN: RAMANATHA RAI

ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ  ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ. ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ ಆಗಿದ್ದು, ಸಮಾಜ ಸ್ನೇಹಿ, ಮಹಿಳಾ ಸ್ನೇಹಿ, ಯುವ ಸ್ನೇಹಿ, ರೈತ ಸ್ನೇಹಿ ಬಜೆಟ್ ಕೂಡ ಆಗಿರುತ್ತದೆ. 

ಬಜೆಟ್ ನಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲನ್ನು ನೀಡಲಾಗಿದೆ. ಎಲ್ಲಾ ಇಲಾಖೆಯಗಳಿಗೂ ಎಲ್ಲಾ ಪ್ರದೇಶಗಳಿಗೂ ಎಲ್ಲಾ ಕ್ಷೇತ್ರಗಳಿಗೂ ಎಲ್ಲಾ ಜಿಲ್ಲೆಗಳಿಗೂ ಎಲ್ಲಾ ವರ್ಗಗಳಿಗೂ ಈ ಬಜೆಟ್ ನ್ಯಾಯ ಒದಗಿಸಿದೆ. ಕರಾವಳಿ ಕರ್ನಾಟಕಕ್ಕೂ ಬಜೆಟ್ ನಲ್ಲಿ ಹೆಚ್ಚು ಆಧ್ಯತೆ ನೀಡಲಾಗಿದೆ. ಕರಾವಳಿಯ ಪ್ರವಾಸೋಧ್ಯಮ ಮತ್ತು ಮೀನುಗಾರ ಸಮುದಾಯಕ್ಕೆ ಬಲ ಕೊಟ್ಟಿದೆ. ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆ ರಚನೆ, ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆ ತಯಾರಿ ಮತ್ತು ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಿರುವುದು ಕರಾವಳಿ ಕರ್ನಾಟಕವನ್ನು ಅಭಿವೃದ್ಧಿಯಲ್ಲಿ ಮುಂದಕ್ಕೆ ಕೊಂಡೊಯ್ಯಲಿದೆ.

ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತವಾಗಿ ನೀಡುವ ಸಾಲವನ್ನು 50 ಸಾವಿರ ರೂಪಾಯಿಂದ 3 ಲಕ್ಷ ರೂಪಾಯಿಗೆ ಹೆಚ್ಚಿಸಿರುವುದರಿಂದ ಅವರ ಬದುಕು ಹಸನಾಗಲಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ನಾರಾಯಣ ಗುರು ವಸತಿ ಶಾಲೆ ಕೊಟ್ಟಿದ್ದಾರೆ. ಕರಾವಳಿಗೆ ದೊಡ್ಡ ಯೋಜನೆಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರಿಗೆ ಕರಾವಳಿ ಕರ್ನಾಟಕದ ಜನರ ಪರವಾಗಿ ಧನ್ಯವಾದಗಳು ಏಂದು ಹೇಳಿದರು.



RELATED ARTICLES

LEAVE A REPLY

Please enter your comment!
Please enter your name here

Most Popular

Recent Comments