HomeFresh Newsಎಲ್‌.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ಎಲ್‌.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ದೆಹಲಿ: ಹಿರಿಯ ರಾಜಕಾರಣಿ ಎಲ್‌.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅವರ ನಿವಾಸದಲ್ಲಿ ಪ್ರದಾನ ಮಾಡಿದರು.

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌. ಸ್ವಾಮಿನಾಥನ್‌ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿಗಳನ್ನು ಶನಿವಾರ ಪ್ರದಾನ ಮಾಡಲಾಗಿತ್ತು. ಅನಾರೋಗ್ಯದ ಕಾರಣ ನಿನ್ನೆ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಆಗಮಿಸಿರಲಿಲ್.  ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments