ಮತಾಂತರ ನಿಷೇಧ ಕಾಯ್ದೆ ವಾಪಸ್ ವಿಚಾರ : ಜಿಲ್ಲೆಯಲ್ಲಿ ಆಂದೋಲನದ ಮಾದರಿ ಹೋರಾಟ : ಶಾಸಕ ಡಾ. ವೈ ಭರತ್ ಶೆಟ್ಟಿ

ರಾಜ್ಯದ ಸಿದ್ದರಾಮಯ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲನದ ಮಾದರಿ ಹೋರಾಟ ನಡೆಸಿ, ಹಿಂದುತ್ವದ ಉಳಿವಿಗಾಗಿ ಟಕ್ಕರ್ ನೀಡಲಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭಾರತ್ ಶೆಟ್ಟಿ ವೈ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಮತಾಂತರ ಹಾವಳಿಯನ್ನು ತಡೆಗಟ್ಟಲು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಬಹಳಷ್ಟು ವಿರೋಧವಾಗಿದ್ದರೂ ಲೆಕ್ಕಿಸದೆ, ಹಿಂದೂ ಸಮಾಜದ ರಕ್ಷಣೆಗಾಗಿ ಬಿಜೆಪಿ ಸರಕಾರ ಈ ನಿರ್ಧಾರ ತಳೆದಿತ್ತು. ಇದೀಗ ಒಂದೆರಡು ಸಮುದಾಯದ ಒಲೈಕೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸರ್ಕಾರ,ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ನಿರ್ಧಾರ ತಳೆದಿರುವುದು
ಮುಂದೆ ಬೃಹತ್ ಆಂದೋಲನ ಒಂದಕ್ಕೆ ನಾಂದಿ ಹಾಡಲಿದೆ ಎಂದು ಪರೋಕ್ಷ ಎಚ್ಚರಿಕೆಯನ್ನು ನೀಡಿದ್ದಾರೆ.

ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯತೆ, ದೇಶ ಪ್ರೇಮವನ್ನು ಬಿಂಬಿಸುವ ಪಠ್ಯಕ್ರಮವನ್ನು ಹಿಂಪಡೆದಿರುವುದುದೇಶದಲ್ಲಿ ಮತ್ತೆ ಮತಾಂಧತೆಯ ಶಕ್ತಿಗಳು ವಿಜೃಂಬಿಸುವಂತೆ ಮಾಡುವಲ್ಲಿ ಸಂಶಯವಿಲ್ಲ,ಮತದಾರ ಕೇವಲ ಒಂದು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಮಾಡುತ್ತಿರುವ ಎಡವಟ್ಟುಗಳನ್ನ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾರ ಸೂಕ್ತ ಉತ್ತರ ಒಂದನ್ನ ನೀಡಲಿದ್ದಾನೆ ಎಂದು ಡಾ. ವೈ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

Related Posts

Leave a Reply

Your email address will not be published.