HomeFresh Newsಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯ ಬಿಡುವವರ ವಿರುದ್ಧ ಕ್ರಮಕ್ಕೆ ಶಾಸಕ ಡಾ. ಭರತ್...

ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯ ಬಿಡುವವರ ವಿರುದ್ಧ ಕ್ರಮಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ. 

ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಸದರಿ ಪೇಜ್ ಗಳ ಅಡ್ಮಿನ್ ಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಮಂಡಲ ಭಾಜಪಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಉಪಸ್ಥಿತರಿದ್ದರು .

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments