ಹಿರಿಯ ಸಮಾಜ ಸೇವಕರೂ, ಭಾಸ್ಕರ್. ಎಂ. ಮಳವೂರು ಅನಾರೋಗ್ಯದಿಂದಾಗಿ ನಿಧನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಸದಸ್ಯರೂ, ಜಿಲ್ಲಾ ಸಂಘಟನಾ ಸಂಚಾಲಕರೂ, ಮಳವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ, ಹಿರಿಯ ಸಮಾಜ ಸೇವಕರೂ ಹಾಗೂ ಜಿಲ್ಲೆಯ ಖ್ಯಾತ ವಾದ್ಯ ಕಲಾವಿದರೂ ಆಗಿರುವ ಶ್ರೀಯುತ ಭಾಸ್ಕರ್. ಎಂ. ಮಳವೂರು ಸಿದ್ಧಾರ್ಥನಗರ ಇವರು ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದಾಗಿ ನಿಧನ ಹೊಂದಿದ್ದಾರೆ. ಇವರ ಪಾರ್ಥೀವ ಶರೀರದ ಅಂತಿಮ ದರ್ಶನದ ವ್ಯವಸ್ಥೆಯನ್ನು ಮಧ್ಯಾಹ್ನ 2 ಗಂಟೆಗೆ ಅವರ ಸ್ವಗ್ರಹದಲ್ಲಿ ನಡೆಸಲಾಗುವುದು.ಮೃತರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ದ. ಕ. ಜಿಲ್ಲಾ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದೆ.