ಫಸಲು ಭೀಮಾ ಯೋಜನೆಗೆ ಅಡಿಕೆ ಮತ್ತು ಕಾಳುಮೆಣಸು ಸೇರ್ಪಡೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಫಸಲು ಭೀಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಕೈಬಿಟ್ಟಿರುವುದು ಅತ್ಯಂತ ನಿರಾಶದಾಯಕವಾಗಿತ್ತು. ಇದೀಗ ಅದನ್ನು ಸೇರ್ಪಡೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಈ ಬಗ್ಗೆ ರೈತರು ನನ್ನ ಗಮನಕ್ಕೆ ತಂದಾಗ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಮಂತ್ರಿ ಮಲ್ಲಿಕಾರ್ಜುನ ಇವರನ್ನು ಭೇಟಿಯಾಗಿ ನಿನ್ನೆ ನಡೆದ ಕ್ಯಾಬಿನೆಟ್ ನಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಫಸಲು ಭೀಮಾ ಯೋಜನೆಗೆ ಸೇರ್ಪಡೆಗೊಳಿಸುವ ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.