ಡೈರಿ ವೃತ್ತದಲ್ಲಿ ಮಹಾನಗರ ಪಾಲಿಕೆ ಜೆಸಿಬಿ ಗರ್ಜನೆ – ಫುಟ್ಪಾತ್ ವ್ಯಾಪಾರಿಗಳಿಗೆ ದೊಡ್ಡ ಆಘಾತ
ಹಾಸನ– ನಗರದಲ್ಲಿ ಬುಧವಾರ ಬೆಳಿಗ್ಗೆ ಮಹಾನಗರ ಪಾಲಿಕೆಯ ತುರ್ತು ತೆರವು ಕಾರ್ಯಾಚರಣೆ ದೊಡ್ಡ ಚರ್ಚೆಗೆ ಗ್ರಾಸವಾಯಿತು. ಪಾಲಿಕೆ ಕಮಿಷನರ್ ಕೃಷ್ಣಮೂರ್ತಿ ಹಾಗೂ ಎಇಇ ಕವಿತಾ ಅವರ ನೇತೃತ್ವದಲ್ಲಿ ಡೈರಿ ವೃತ್ತದಿಂದ ಕಾಟಿಹಳ್ಳಿ ಸರ್ಕಲ್‌ವರೆಗೆ ಫುಟ್ಪಾತ್ ಆಕ್ರಮಣ ತೆರವು ನಡೆಸಲಾಯಿತು. ಜೆಸಿಬಿ ಯಂತ್ರದ ಮೂಲಕ ಅಕ್ರಮ ಕಟ್ಟಡಗಳು, ಶೆಡ್ಗಳು, ಮತ್ತು ತಾತ್ಕಾಲಿಕ ಅಂಗಡಿಗಳನ್ನು ತೆರವುಗೊಳಿಸಲಾಯಿತು.
ಜಿಲ್ಲಾಧಿಕಾರಿ ಆದೇಶದ ಮೇರೆಗೆ ತೆರವು ಕಾರ್ಯಚರಣೆ ಕೈಗೊಂಡಿದ್ದು, ಪಾದಚಾರಿಗಳ ಸುರಕ್ಷತೆ ಮತ್ತು ಸಾರ್ವಜನಿಕರಿಗೆ ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ರಸ್ತೆಗಳು ಕಿರಿದಾಗಿದ್ದು, ಫುಟ್ಪಾತ್‌ಗಳಲ್ಲಿ ವ್ಯಾಪಾರ ನಡೆಯುತ್ತಿರುವುದರಿಂದ ದೈನಂದಿನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು ಎಂದು ಅವರು ಸ್ಪಷ್ಟಪಡಿಸಿದರು.


















