ಜು.22ರಂದು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಜನ್ಮ ವರ್ಧಂತ್ಯುತ್ಸವ

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವವಾಸು ಸಂವತ್ಸರದ ೨೧ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಜಗದ್ಗುರುಗಳ ಜನ್ಮ ವರ್ಧಂತ್ಯುತ್ಸವ ಜುಲೈ ೨೨ರಂದು ನಡೆಯಲಿದ್ದು, ವಿದ್ಯಾರ್ಥಿ ಅಭಿನಂದನೆ ಜುಲೈ ೨೭ರಂದು ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆಯಲಿದೆ.
ಪಡುಕುತ್ಯಾರು ಚಾತುರ್ಮಾಸ್ಯ ವೃತ ನಿರ್ವಹಣಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ವಿ. ಗಂಗಾಧರ್ ಆಚಾರ್ಯ ಅವರ ಘನ ಉಪಸ್ಥಿತಿಯಲ್ಲಿ ದಿನೇಶ್ ಆಚಾರ್ಯ ಪಡುಬಿದ್ರಿ ಅವರ ಅವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿ. ಶ್ರೀಧರ್ ಆಚಾರ್ಯ ವಡೇರಹೊಬಳಿ, ಪ್ರಧಾನ ಕಾರ್ಯದರ್ಶಿ ಲೊಕೇಶ್ ಎಂ.ಬಿ. ಆಚಾರ್, ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ ಅವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ್ದಾರೆ.