ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಪಕ್ಷ ಅವಕಾಶ ನೀಡಿದ ಹಿನ್ನಲೆಯಲ್ಲಿ ಎ.12 ರಂದು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ದಂಪತಿ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಬಳಿಕ ಅವರು ಡಾ.ಎಂ.ಕೆ ಪ್ರಸಾದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.