ಬಿಜೆಪಿಯಿಂದ “ಸಮಪ೯ಣಾ ದಿನ” ಆಚರಣೆ

ಮೂಡುಬಿದಿರೆ: ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ತಮ್ಮ ಜೀವನವನ್ನು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿಸಿ ದೇಶದ ಯುವಜನತೆಗೆ ಮಾರ್ಗದರ್ಶಿಯಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯ “ಸಮರ್ಪಣಾ ದಿನವನ್ನು” ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲ ಹಾಗೂ ಮೂಡುಬಿದಿರೆ ಮಹಾಶಕ್ತಿಕೇಂದ್ರದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಮೂಡುಬಿದಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ, ಹಿರಿಯರಾದ ಕೆ ಆರ್ ಪಂಡಿತ್, ಮೂಡದ ಮಾಜಿ ಅಧ್ಯಕ್ಷ ಮೇಘನಾಥ ಶೆಟ್ಟಿ. ಎ.ಪಿ.ಎಮ್.ಸಿ ಸದಸ್ಯರಾದ ಕೃಷ್ಣರಾಜ ಹೆಗ್ಡೆ, ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್ , ಉಪಾಧ್ಯಕ್ಷ ನಾಗರಾಜ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಸ್ವಾತಿ ಪ್ರಭು, ಮತ್ತು ಪುರಸಭಾ ಸದಸ್ಯರು ಹಾಗೂ ಪಕ್ಷದ ಅನನ್ಯ ಜವಾಬ್ಧಾರಿಯುತ ಪ್ರಮುಖರು ಭಾಗವಹಿಸಿ ದೀನ್ ದಯಾಳ್ ಅವರ ಭಾವಚಿತ್ರಕ್ಕೆ ಪುಷ್ಪಾಚ೯ನೆಗೈದರು.

Related Posts

Leave a Reply

Your email address will not be published.