ಬಿಜೆಪಿಯವರೇ ಕಾಂಗ್ರೆಸ್ ಸರ್ಕಾರದ ಟಾರ್ಗೆಟ್ ಯಾಕೆ: ಭರತ್ ಶೆಟ್ಟಿ ಪ್ರಶ್ನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯಂತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ ಮಾಡುವ ಮುನ್ನ ರಾಜ್ಯದಲ್ಲಿ ಆಗುತ್ತಿರುವ ಕೊಲೆ, ಸುಲಿಗೆ, ಭಯೋತ್ಪಾದನೆಯನ್ನು ಮಟ್ಟಹಾಕಿ ರಾಜ್ಯವನ್ನು ಮೊದಲು ರಕ್ಷಿಸಿ ಎಂದಿದ್ದಾರೆ.

add- Suraj

Related Posts

Leave a Reply

Your email address will not be published.