ಬಿಜೆಪಿ ಕಾಪು ಮಂಡಲ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ “ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ ಶಾಸಕರು ಮಾತನಾಡಿ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯಶಸ್ವಿ ಯೋಜನೆಗಳಿಂದ ಇಂದು ಪ್ರಪಂಚವೇ ಭಾರತದತ್ತ ತಿರುಗಿನೊಡುವಂತಾಗಿದೆ. ಆತ್ಮನಿರ್ಭರ ಭಾರತದಿಂದ ದೇಶ ಆರ್ಥಿಕವಾಗಿ ಬಲ ಗೊಳ್ಳುತ್ತಿದ್ದು ಭಾರತವು ಜಪಾನ್ ಅನ್ನು ಹಿಂದಿಕ್ಕಿ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಜರ್ಮನ್ ನನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ತಲುಪುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಸದಾನಂದ ಪ್ರಭು, ಗಿರೀಶ್ ಅಂಚನ್ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.