ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ರಹಸ್ಯ ಹವನ

ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು, ಜೂ.11ರಂದು ಪ್ರಾರಂಭವಾಗಿದ್ದು, ಜೂ.18ರವರೆಗೆ ಹವನ ನಡೆಯಲಿದೆ

ನಿರಂತರ 9 ದಿನಗಳ ಕಾಲ ನಡೆಯುವ ಈ ಹೋಮದ ನೇತೃತ್ವವನ್ನು ವಿದ್ವಾನ್ ಬಾಲಕೃಷ್ಣ ಕಾರಂತ್ ವಹಿಸಿದ್ದಾರೆ. ಅತ್ಯಂತ ಗೌಪ್ಯವಾಗಿ ಈ ಹವನವನ್ನು ನಡೆಸಲಾಗುತ್ತಿದ್ದು, ಯಾವ ಉದ್ದೇಶ ಪ್ರಾಪ್ತಿಗಾಗಿ ಈ ಹೋಮ ನಡೆಸಲಾಗುತ್ತಿದೆ ಎಂಬ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ. ಒಳಗೆ ನಡೆಸಲಾಗುತ್ತಿರುವ ಧಾರ್ಮಿಕ ಕಾರ್ಯಕ್ರಮದ ವಿವರ ಹೊರ ಹೋಗಬಾರದೆಂಬ ಉದ್ದೇಶದಿಂದ ಜಮೀನಿನ ದ್ವಾರಗಳನ್ನು ಸಂಪೂರ್ಣವಾಗಿ ಮುಚ್ಚಿ ರಹಸ್ಯವನ್ನು ಕಾಪಾಡಲಾಗಿದೆ.

ಇದು ಸ್ಥಳೀಯರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಧಾರ್ಮಿಕ ಕಾರ್ಯಕ್ರಮಗಳು ನಡೆಯುವಾಗ ಅಕ್ಕ ಪಕ್ಕದ ಮನೆಯವರಿಗೆ ಹಾಗೂ ನೆಂಟರಿಷ್ಟರಿಗೆ ಹೇಳಿ ಮಾಡುವುದು ವಾಡಿಕೆಯಾಗಿರುವಾಗ ಬಚ್ಚಿಟ್ಟು ಮಾಡುತ್ತಿರುವುದು ಯಾಕೇ ಎನ್ನುವುದು ಸ್ಥಳೀಯರಲ್ಲಿ ಕೂತೂಹಲ ಹೆಚ್ಚಿಸಿದೆ.

ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿನಾಯ ಸೋಲು ಕಂಡಿದ್ದು, ಪಕ್ಷದ ಪ್ರಮುಖ ನಾಯಕರುಗಳ ತಪ್ಪುಗಳು, ಎಡವಟ್ಟು ನಿರ್ಣಯಗಳು, ಅಹಂಕಾರ ಪ್ರವೃತ್ತಿ ಸೋಲಿಗೆ ಕಾರಣವೆಂಬ ಆಕ್ರೋಶ ಪಕ್ಷದ ಕಾರ್ಯಕರ್ತರಲ್ಲಿದೆ. ಪಕ್ಷದ ನಾಯಕತ್ವದಲ್ಲಿ ಅಮೂಲಾಗ್ರ ಪರಿವರ್ತನೆ ಮಾಡುವ ಮೂಲಕ ಪಕ್ಷನ್ನು ಲೋಕಸಭೆ ಚುನಾವಣೆಗೆ ಸಿದ್ದಗೊಳಿಸಬೇಕು ಎಂಬ ಅಗ್ರಹವು ಕಾರ್ಯಕರ್ತರ ವಲಯದಿಂದ ಕೇಳಿ ಬರುತ್ತಿದೆ. ಈ ಕುರಿತ ಅಭಿಯಾನ ಸಾಮಾಜಿಕ ಜಾಲತಾಣದಲ್ಲೂ ನಡೆಯುತ್ತಿದೆ.

Related Posts

Leave a Reply

Your email address will not be published.