ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಭೇಟಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್ ಮುಖಂಡರಾದ ಪ್ರದೀಪ ರಾವ್, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಜೆಪಿ ನಡ್ದಾ ಇಂದು ಉಡುಪಿ ಪೇಜಾವರ ಮಠದ ರಾಮ ವಿಠಲ ಸಭಾಂಗಣದಲ್ಲಿ  ಕರಾವಳಿ ಭಾಗದ ವಿವಿಧ ಸ್ವಾಮೀಜಿಯವರೊಂದಿಗೆ ಮಾತುಕತೆ ನಡೆಸಿದರು.

ಸಭೆಯಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ, ಮಾಣಿಲ ಸ್ವಾಮೀಜಿ, ಗುರುಪುರ ವಜ್ರಾದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಮೂಡಬಿದಿರೆಯ ಜೈನ ಮಠದ ಸ್ವಾಮೀಜಿ ಮೊದಲಾದವರು ಇದ್ದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸಚಿವರಾದ ಎಸ.ಅಂಗಾರ, ಸುನಿಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.