ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರನ್ನು ಆತ್ಮೀಯವಾಗಿ ಸ್ವಾಗತಿಸಿದ ನಳಿನ್ ಕುಮಾರ್ ಕಟೀಲು

ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. , ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾಸಕ ರಾಜೇಶ್ ನಾಯ್ಕ್, ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.