ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ರಾಹುಲ್ ಗಾಂಧಿಯವರಿಂದ ಹಿಂದೂ ಸಮಾಜಕ್ಕೆ ಅಪಮಾನ
ಲೋಕ ಸಭೆಯಲ್ಲಿ ರಾಹುಲ್ ಗಾಂಧಿ ಏನು ಮಾತಾಡಬೇಕು ಅದನ್ನು ಮಾತನಾಡದೆ ಸಮಸ್ತ ಹಿಂದೂ ಸಮಾಜವನ್ನು ಅಪಮಾನ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಅವರು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಬಗ್ಗೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ ಹಾಲಿನ ದರ ಏರಿಕೆಯಾಗಿದ್ದು, ಬಡವರ ಮಕ್ಕಳ ಹೊಟ್ಟೆಗೆ ಹೊಡೆದಿದ್ದಾರೆ, ಇಡೀ ಕಾಂಗ್ರೆಸ್ ಪಕ್ಷದ ಶಾಸಕರು ಕಮಿಷನ್ ಹೊಡೆಯುವ ಮೂಲಕ ಭ್ರಷ್ಟಾಚಾರದ ಮಾಡುತ್ತಿದ್ದಾರೆ ಎಂದು ಹೇಳಿದರು.
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಮಾತನಾಡಿ, ಸಿದ್ದರಾಮಯ್ಯ ಸರಕಾರ ಬಂದ ಮೇಲೆ ರಾಜ್ಯದ ಜನರಿಗೆ ತೆರಿಗೆ ಜಾಸ್ತಿಯಾಗಿದ್ದು, ಮೂಲಕ ಬರೆ ಎಳೆದಿದ್ದಾರೆ, ರಾಜ್ಯದ ರೈತರ ಮಕ್ಕಳಿಗೆ ವಿದ್ಯಾ ನಿಧಿ ಹಾಗೆ ಯಡಿಯೂರಪ್ಪ ಸರ್ಕಾರದಲ್ಲಿ ರೈತರಿಗೆ ನಾಲ್ಕು ಸಾವಿರ ರೂಪಾಯಿಗಳನ್ನು ನೀಡುತ್ತಿದ್ದರು ಇದನ್ನೆಲ್ಲಾ ನಿಲ್ಲಿಸಿ ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಶ್ರೀನಿವಾಸ್ ಹಾಗೂ ಇತರರು ಪಾಲ್ಗೊಂಡಿದ್ದರು