ದ.ಕ. ಜಿಲ್ಲೆಯ ಬಿಜೆಪಿ ಶಾಸಕರಿಂದ ಪ್ರತಿಭಟನೆ

ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ ಕಾಂಗ್ರೆಸ್ ನಾಯಕರು ದುರಾಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳು ಕ್ಷೇತ್ರದ ಶಾಸಕರನ್ನು ಕಡೆಗಣಿಸಿ ದರ್ಪ ಮೆರೆಯುತ್ತಾರೆ. ಗ್ರಾಪಂ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಾರೆ. ಕಾಂಗ್ರೆಸ್ ನಾಯಕರ ಮನೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಮಾತು ಕೇಳದ ಅಧಿಕಾರಿಗಳನ್ನು ಸಸ್ಪೆಂಡ್, ವರ್ಗಾವಣೆ ಮಾಡಿಸಿ ಹೆದರಿಸುತ್ತಿ ದ್ದಾರೆ ಎಂದು ಧರಣಿ ಕುಳಿತ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರಣಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದರು.
