ಬಿಜೆಪಿ ಸುಳ್ಯ ಮಂಡಲದಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಮಳೆಯಿಂದಾಗಿ ಕೆಟ್ಟು ಹೋಗಿರುವ ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ಕೂಡ ಅನುದಾನ ನೀಡದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಕಾಣಿಯೂರಿನಲ್ಲಿ ಪ್ರತಿಭಟನೆ ನಡೆಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ಶಾಸಕಿ ಕುಮಾರಿ ಭಾಗಿರತಿ ಮುರುಳ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ ರಾಕೇಶ್ ರೈ ಕೆಡಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ವಿನಯ್ ಕುಮಾರ್ ಕಂದಡ್ಕ, ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಕೇವಲ ಹಗರಣಗಳಲ್ಲಿ ಮುಳುಗಿರುವ ರಾಜ್ಯ ಸರ್ಕಾರವು ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದ್ದು, ಕೇವಲ ಭ್ರಷ್ಟಾಚಾರದಲ್ಲಿ ಮಾತ್ರ ಮುಳುಗಿದೆ. ಆಶ್ವಾಸನೆ ನೀಡಿರುವ ಗ್ಯಾರಂಟಿಗಳನ್ನು ಕೂಡ ಸರಿಯಾಗಿ ನೀಡದೆ, ಎಲ್ಲಾ ರಂಗಗಳಲ್ಲಿಯೂ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ವಂಚಿಸುವ ಕೆಲಸ ಮಾಡುತ್ತಿದೆ, ಹೊಸ ರಸ್ತೆ ಸೇತುವೆಗಳ ಅಭಿವೃದ್ಧಿಯನ್ನು ಮಾಡುವುದು ಕನಸಿನ ಮಾತಾಗಿದೆ, ಮಳೆಯಿಂದಾಗಿ ಹದಗೆಟ್ಟಿರುವ ರಸ್ತೆಗಳ ಗುಂಡಿ ಮುಚ್ಚಲು ಕೂಡ ಸರಕಾರವು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ದೂಷಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಸ್ವಾಗತಿಸಿ ನಿರೂಪಿಸಿದರು, ಮಂಡಲ ಕಾರ್ಯದರ್ಶಿ ಗಣೇಶ್ ಯುದ್ಧ ನಡೆಕ ವಂದಿಸಿದರು.
