ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶ

ಪುತ್ತೂರು: ಭಾರತವನ್ನು ಜಗತ್ತಿಗೇ ನಾಯಕತ್ವ ಸ್ಥಾನದಲ್ಲಿ ನಿಲ್ಲಿಸಿರುವ ನರೇಂದ್ರ ಮೋದಿಯವರ ವಿಚಾರದಲ್ಲಿ ಮೈಮರೆವು ಬೇಡ. ನಮ್ಮ ಗುರಿ, ಉದ್ದೇಶ, ಸಂಕಲ್ಪ, ಶ್ರಮ ಮೋದಿಯವರನ್ನು ಮತ್ತಷ್ಟು ವರ್ಷಗಳ ಕಾಲ ಪ್ರಧಾನಿಯಾಗಿಸುವುದೇ ಆಗಿರಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ.

ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ದ.ಕ. ಸಂಸದ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಸ್ವಾಮಿ ವಿವೇಕಾನಂದ ಕಂಡ ಭಾರತದ ಕನಸು ಈಗ ನನಸಾಗುತ್ತಿದೆ. ಈ ಹಿಂದೆ ಎನ್‌ಡಿಎ, ಯುಪಿಎಗಳು ಎಷ್ಟು ಸ್ಥಾನಗಳನ್ನು ಪಡೆಯುತ್ತವೆ ಎಂಬ ವಿಚಾರಗಳೇ ಲೋಕಸಭಾ ಚುನಾವಣೆ ಸಂದರ್ಭದ ಪ್ರಮುಖ ಚರ್ಚೆಯಾಗುತ್ತಿದ್ದರೆ ಇಂದು ಮುಂದಿನ ಬಾರಿ ಮತ್ತೆ ಮೋದಿ ಪ್ರಧಾನಿ ಎಂಬುದೇ ಪ್ರಮುಖ ವಿಚಾರವಾಗಿದೆ. ಸಾಮಾನ್ಯ ಕಾರ್ಯಕರ್ತನೂ ಲೋಕಸಭಾ ಸದಸ್ಯನಾಗಬಲ್ಲ ಏಕೈಕ ಪಕ್ಷ ಬಿಜೆಪಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ,ಬಿಜೆಪಿ ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್, ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಸಹ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ,ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್ ಮೊದಲಾದವರಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.