ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ವಿಶೇಷ ಕಾರ್ಯಕಾರಿಣಿಯು ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕೆ. ಆರ್ ಪಂಡಿತ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಕಸ್ತೂರಿ ಪಂಜ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಹಾಗೂ ವಿವಿಧ ಮೊರ್ಚಾ ಹಾಗು ಪ್ರಕೋಷ್ಠಗಳ ಪದಾಧಿಕಾರಿಗಳು, ಶಕ್ತಿಕೇಂದ್ರ ಪ್ರಮುಖರು ಉಪಸ್ಥಿತರಿದ್ದರು.
