ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ
ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ ಪೆರ್ವೋಡಿ ಹಾಗೂ ನಿತೇಶ್ ಕಲ್ಲೇಗ, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಹಾಗೂ ಯುವ ಮೋರ್ಚಾ ಗ್ರಾಮಾಂತರ ಮಂಡಲದ ಪ್ರಭಾರಿಗಳಾದ ಕೃಷ್ಣ ಎಂ ಆರ್ ಕಡಬ, ಜಿಲ್ಲಾ ಕಾರ್ಯದರ್ಶಿಗಳಾದ ಮಚ್ಚಿಮಲೆ ವಿರುಪಾಕ್ಷ ಭಟ್, ಬಿಜೆಪಿ ಮುಖಂಡರಾದ ಮುರಳಿಕೃಷ್ಣ ಹಸಂತಡ್ಕ, ಯುವ ಮೋರ್ಚಾ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಆದೇಶ್ ಶೆಟ್ಟಿ ಹಾಗೂ ಎರಡು ಮಂಡಲದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.


















