ಕೇರಳ : ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ
ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ, ಪೊಲೀಸರು, ಅಗ್ನಿಶಾಮಕ ದಳ ಹಾಗೂ ಆರೋಗ್ಯ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟು ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಸಚಿವ ಪಿ ರಾಜೀವ್ ತಿಳಿಸಿದ್ದಾರೆ.
ಬೆಳಿಗ್ಗೆ 9 ಗಂಟೆಯ ಸುಮಾರು ಸ್ಫೋಟ ಸಂಭವಿಸಿದ್ದು ಕೇಂದ್ರದಲ್ಲಿ 2000 ಕ್ಕೂ ಹೆಚ್ಚು ಕ್ರಿಶ್ಚಿಯನ್ ಸಮುದಾಯದ ಜನ ಇದ್ದರು ಎಂದು ತಿಳಿದು ಬಂದಿದೆ.