Home Blog Full WidthPage 14

ಕಾಪು ತಾಲೂಕು ದಸರಾ ಕ್ರೀಡಾಕೂಟ:ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಚಾಲನೆ

ಪಡುಬಿದ್ರಿ :ಕಾಪು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯೋಜನೆಯಲ್ಲಿ ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2025 – 26 ಭಾನುವಾರದಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಉದ್ಘಾಟಿಸಿದರು. ಈ

ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯ ಬಿಜೆಪಿ ನಿಯೋಗ

ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಹಿನ್ನೆಲೆ ರವಿವಾರ ಬೆಳಗ್ಗೆ ರಾಜ್ಯ ಬಿಜೆಪಿ ನಿಯೋಗ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ದೇವರ ದರ್ಶನ ಪಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರು, ಬಿಜೆಪಿಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ

ಜಮ್ಮು-ಕಾಶ್ಮೀರದ: ಕಥುವಾ ಜಿಲ್ಲೆಯ ಮೇಘಸ್ಫೋಟ: ನಾಲ್ವರು ಸಾವು, ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪರಿಣಾಮ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ

ಮೂಡುಬಿದಿರೆ:ಹಿರಿಯ ವೈದ್ಯ ಡಾ.ಎಂ.ರಾಮ ಭಟ್ ನಿಧನ

ಮೂಡುಬಿದಿರೆ: ಹಿರಿಯ ಆಯರ್ವೇದ , ಅಲೋಪತಿ ವೈದ್ಯ ಡಾ. ಎಂ. ರಾಮ ಭಟ್ ( 92) ಅಲ್ಪಕಾಲದ ಅಸ್ವಾಸ್ಥ್ಯದ ಬಳಿಕ ಅರಮನೆ ರಸ್ತೆಯ ತಮ್ಮ ಮಹಾಲಸಾ ನಿವಾಸದಲ್ಲಿ ಅ17 ರಂದು ನಿಧನ ಹೊಂದಿದರು. ಅವರು ಸಹೋದರ, ಸಹೋದರಿಯರು, ಪುತ್ರ ಹೋಮಿಯೋ ಪತಿ ವೈದ್ಯ ಡಾ. ಗಂಗಾಧರ ಭಟ್ , ಇಬ್ಬರು ಪುತ್ರಿಯರು, ಸೊಸೆ ಡಾ. ವಿನಯಾ ಜಿ. ಭಟ್ ಸಹಿತ ಬಂಧುವರ್ಗವನ್ನು ಅಗಲಿದ್ದಾರೆ.1956ರಲ್ಲಿ ಎಲ್.ಎ. ಎಂ. ಎಸ್ ಪದವೀಧರ ವೈದ್ಯರಾಗಿ ಬೆರಳೆಣಿಕೆಯ ವೈದ್ಯರಿದ್ದ ಕಾಲದಲ್ಲಿ 1958 ರಿಂದ […]

ಶ್ರೀ ಓಂಕಾರೇಶ್ವರೀ ಮಂದಿರ ಹಾಗೂ ಮುಂಡಾಲ ಸಮಾಜ ಸೇವಾ ಟ್ರಸ್ಟ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಹಳೆಯಂಗಡಿ:79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಓಂಕಾರೇಶ್ವರೀ ಮಂದಿರ(ರಿ) ಹಾಗೂ ಮುಲ್ಕಿಹೋಬಳಿ 9 ಮಾಗಣೆಯ ಮುಂಡಾಲ ಸಮಾಜ ಸೇವಾ ಟ್ರಸ್ಟ್(ರಿ) ವತಿಯಿಂದ ಜಂಟಿಯಾಗಿ ನಡೆಸಲಾಯಿತು. ಅಧ್ಯಕ್ಷರಾದ ಶ್ರೀ ಟಿ .ಸದಾಶಿವ ಕುಂದರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. 9 ಮಾಗಣೆ ಮುಂಡಾಲ ಸಮಾಜದ ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾದ ಶ್ರೀ ಶಂಕರ ಮಾಸ್ಟರ್ ಗೋಳಿಜೋರ ಇವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ ನೂರಾರು ವರ್ಷಗಳಿಂದ ದೇಶದ

ದಾಖಲೆಗಳಿಲ್ಲದೆ ಸಾಗಾಟ ಮಾಡುತಿದ್ದ 55 ಪವನ್ ಚಿನ್ನ ಹಾಗೂ 4 ಲಕ್ಷ ರೂ. ವಶಕ್ಕೆ

ಮಂಜೇಶ್ವರ: ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ಣಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 55 ಪವನ್ (438.77 ಗ್ರಾಂ) ಚಿನ್ನಾಭರಣ ಹಾಗೂ 4 ಲಕ್ಷ ರೂಪಾಯಿ ಹಣಗಳೊಂದಿಗೆ ಇಬ್ಬರನ್ನು ಸೆರೆ ಹಿಡಿಯಲಾಗಿದೆ. ಶನಿವಾರ ಸಂಜೆ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಕೋಝಿಕ್ಕೋಡ್ ನಿವಾಸಿಗಳಾದ ನಾಸರ್ ಹಾಗೂ ಈತನ ಪುತ್ರ ಮಹಮ್ಮದ್ ಫಾಸಿಲ್

ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ : ವೃದ್ಧ ಆರೆಸ್ಟ್

ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿದ್ದ ವೃದ್ಧನನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬೆಳುವಾಯಿಯ ನಿವಾಸಿ ವೃದ್ಧ ರೆಹ್ಮಾನ್ ಬಂಧಿತ.ಮಂಗಳೂರು-ಮೂಡುಬಿದಿರೆ–ಕಾಕ೯ಳ ಮಧ್ಯೆ ಸಂಚರಿಸುವ ಖಾಸಗಿ ಬಸ್ ನಲ್ಲಿ ಘಟನೆ ನಡೆದಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಈ ಬಗ್ಗೆ ಯಾರೂ ದೂರು ಕೊಡದ ಹಿನ್ನೆಲೆಯಲ್ಲಿ ಪೊಲೀಸರು ವೃದ್ಧನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಆದರೆ

ತಮ್ಮನ ಮೃತದೇಹ ನೋಡಲು ಬಂದ ಅಣ್ಣನೂ ಹೃದಯಾಘಾತದಿಂದ ಸಾವು

ಮೂಡುಬಿದಿರೆ : ಅನಾರೋಗ್ಯದಿಂದ ಸಾವನ್ನಪ್ಪಿದ ತಮ್ಮನ ಮೃತದೇಹವನ್ನು ನೋಡಲು ದೂರದ ಗುಜರಾತಿನಿಂದ ಬಂದಿದ್ದ ಅಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಿಡ್ಡೋಡಿಯಲ್ಲಿ ನಡೆದಿದೆ. ತಾಲೂಕಿನ ನಿಡ್ಡೋಡಿಯಲ್ಲಿ ನಿವಾಸಿ, ಜನಪರ ಕೆಲಸಗಳಿಂದ ಪರಿಸರದಲ್ಲಿ ಗುರುತಿಸಿಕೊಂಡಿದ್ದ ಪ್ರವೀಣ್ ಶೆಟ್ಟಿ ಅವರು ಕೆಲಕಾಲದ ಅಸೌಖ್ಯದಿಂದ ಆಸ್ಪತ್ರೆ ಸೇರಿದ್ದರು. ಸಾಕಷ್ಟು ಖರ್ಚು ಮಾಡಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.ಸಹೋದರ ಮೃತಪಟ್ಟ ಸುದ್ಧಿ ತಿಳಿದು ಗುಜರಾತ್

ಮೂಡುಬಿದಿರೆ : ಬೆಳುವಾಯಿ ಪ್ಲೈ ಓವರ್ ಗೆ ಕಾರು ಢಿಕ್ಕಿ : ಓವ೯ ಬಲಿ, ಮೂವರು ಗಂಭೀರ

ಮೂಡುಬಿದಿರೆ: ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಬೆಳುವಾಯಿ ಪ್ಲೈ ಓವರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಓವ೯ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ವೇಣೂರು ಪೆಮು೯ಡ ನಿವಾಸಿ ಸುಮಿತ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ

ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂಭಾಗದಲ್ಲಿ ಪ್ರಪ್ರಥಮ ಬಾರಿಗೆ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆವರಿಸಲಾಯಿತು. ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆ.ಬಾಬು ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು