Home Blog Full WidthPage 191

ಮಂಗಳೂರು: ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ನಗರದ ಬೆಂದೂರ್ ವೆಲ್‌ನಲ್ಲಿರುವ ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ವಾಸವಿದ್ದ ಗುತ್ತಿಗೆದಾರ, ಬಿಲ್ಡರ್ ಮೋಹನ್ ಅಮೀನ್ (೬೫) ಆತ್ಮಹತ್ಯೆಗೈದ ಘಟನೆ ನಡೆದಿದೆ.   ಅವರಿಂದು ಸುಮಾರಿಗೆ ತಾವು ವಾಸವಿದ್ದ14 ಮಹಡಿಯ ಅಪಾರ್ಟ್ ಮೆಂಟ್‌ನ ಟೆರೇಸ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಮಂಗಳೂರಿನ ವಿವಿಧ

ಪುತ್ತೂರು: ಗೃಹರಕ್ಷಕದಳ ಕಛೇರಿ ಕಟ್ಟಡಕ್ಕೆ ಸರಕಾರದಿಂದ ಜಾಗ ಮಂಜೂರು

  ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪುತ್ತೂರು ಘಟಕವು ಸುಮಾರು 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಹೊಸ ಕಛೇರಿ ನಿರ್ಮಿಸುವ ಸಲುವಾಗಿ ಸರಕಾರದಿಂದ 10 ಸೆಂಟ್ಸ್ ಖಾಲಿ ಜಾಗ ಕೊಟೆಚಾ ಸಭಾಂಗಣದ ಸಮೀಪದ ಶಿವನಗರದಲ್ಲಿ ಮಂಜೂರಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಪುತ್ತೂರು ಘಟಕಕ್ಕೆ ಭೇಟಿ ನೀಡಿ ಹೊಸತಾಗಿ ಮಂಜೂರಾದ ಜಾಗದ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತೂರು ಘಟಕದ ಘಟಕಾಧಿಕಾರಿ ಅಭಿಮನ್ಯು ರೈ,

ಮಲ್ಪೆ: ನೀರಿನಲ್ಲಿ ಮುಳುಗಿ ಬಾಲಕಿ ಸಾವು: ಇನ್ನೋರ್ವ ಬಾಲಕಿಯ ರಕ್ಷಣೆ

ಉಡುಪಿಯ ಮಲ್ಪೆ ಬೀಚ್‌ನ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಇದೇ ವೇಳೆ ಇನ್ನೋರ್ವ ಬಾಲಕಿಯನ್ನು ರಕ್ಷಿಸಲಾಗಿದೆ.   ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಆಕೆಯ ಗೆಳತಿ ಯಶಸ್ವಿನಿ(16) ಎಂಬವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಇವರಿಬ್ಬರೂ ಮೂರು ದಿನಗಳ ಹಿಂದೆ ಮನೆ ಬಿಟ್ಟು ಮಂಗಳೂರು ಕಡೆಗೆ

ಜನಸಾಮಾನ್ಯರಿಗೆ ತ್ವರಿತ ನ್ಯಾಯ ಅಗತ್ಯ: ಕಾನೂನು ಸಚಿವ ಹೆಚ್.ಕೆ. ಪಾಟೀಲ್

ಜಿಲ್ಲಾ ನ್ಯಾಯಾಂಗ ಉಡುಪಿ, ವಕೀಲರ ಸಂಘ ಬ್ರಹ್ಮಾವರ  ಇವರ ಸಂಯುಕ್ತ ಆಶ್ರಯದಲ್ಲಿ  ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಾಣವಾದ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವನ್ನು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಉದ್ಘಾಟಿಸಿದರು.   ನೂತನ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ರಾಜ್ಯದಲ್ಲಿ ಸಾರ್ವಜನಿಕರಿಗೆ ಶೀಘ್ರ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್

ಸಕಲೇಶಪುರ: ಭೀಕರ ಅಪಘಾತ-ಬೈಕ್ ಸವಾರರಿಗೆ ಗಂಭೀರ ಗಾಯ

ಸಕಲೇಶಪುರ ನಗರದ ಬಿಎಂ ರಸ್ತೆಯಲ್ಲಿ ಬೈಕ್ ಹಾಗೂ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡು ಮೂಲದ ಲಾರಿಯ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾದ ಘಟನೆ ನಡೆದಿದೆ. ನಂತರ ಲಾರಿಯನ್ನು ಬಾಳುಪೇಟೆಯ ಹತ್ತಿರ ತಡೆದು ನಿಲ್ಲಿಸಿಲಾಗಿದೆ.    ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದಂತ ಮಂಜುಗೆ ಗಂಭೀರ ಗಾಯವಾಗಿದ್ದು ಇನ್ನೊರ್ವ ಯುವರಾಜ್‌ಗೆ ಸಣ್ಣಪುಟ್ಟ ಗಾಯಗಳಾಗಿದೆ. ಇವರು ಜಮ್ಮನಹಳ್ಳಿ ಹಾಗೂ ಬಂದಿಹಳ್ಳಿಯವರು ಎಂದು ತಿಳಿದು ಬಂದಿದೆ. ಮಂಜುನಾಥ್ ಸ್ಥಿತಿ

ಭಾರತದ 508 ರೈಲು ನಿಲ್ದಾಣ ಪುನರಾಭಿವೃದ್ಧಿ: ಪ್ರಧಾನಿ ಮೋದಿ ಚಾಲನೆ

ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು.   ಕರ್ನಾಟಕದ ಮಂಗಳೂರು, ಅರಸೀಕೆರೆ, ಹರಿಹರ ಸೇರಿ 15 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. “ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವ ಭಾರತವು ತನ್ನ ಅಮೃತ ಕಾಲದ ಆರಂಭದಲ್ಲಿದೆ. ಹೊಸ ಶಕ್ತಿ,

ಕಾರ್ಮಿಕ ಕಾನೂನುಗಳನ್ನು ಸಂಹಿತೆಗಳನ್ನಾಗಿಸಿ ಮತ್ತೆ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ – ಸುನಿಲ್ ಕುಮಾರ್ ಬಜಾಲ್

ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಅದನ್ನು ಸಂಹಿತೆಗಳನ್ನಾಗಿಸುವ ಮೂಲಕ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದಾಗಿದೆ.ಒಂದು ಕಡೆ ಬೆಲೆಯೇರಿಕೆಯ ಸಂಕೇತವಾದರೆ,ಮತ್ತೊಂದು ಕಡೆ ದಿನವಿಡೀ ದುಡಿದರೂ ಕನಿಷ್ಠ ಕೂಲಿಯಿಲ್ಲದೆ ಪರದಾಡುವಂತಹ ದುಸ್ಥಿತಿ ಒದಗಿ ಬಂದಿದೆ.ಸಾಮಾಜಿಕ ಭದ್ರತೆಯಿಲ್ಲದ ಅಸಂಘಟಿತ ಕ್ಷೇತ್ರದ ಕಾರ್ಮಿಕರ ಬದುಕು ಹೇಳತೀರದಾಗಿದೆ ಎಂದು CITU ದ. ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ

ದಲಿತ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಮೌನ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ

ವಿಟ್ಲದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಡುಪಿಯ ಘಟನೆಯಲ್ಲಿ ಶಾಸಕರು, ಸಂಸದರು ಪ್ರತಿಭಟನೆ ಮಾಡಿದ್ದರು. ಎಬಿವಿಪಿಯವರು ಗೃಹ ಸಚಿವರ ಮನೆಗೆ ಮುತ್ತಿಗೆಯನ್ನು ಕೂಡ ಹಾಕಿದ್ದಾರೆ. ಆದರೆ ವಿಟ್ಲದ ಕೇಸ್‍ನಲ್ಲಿ ಯಾಕೆ ಪ್ರತಿಭಟನೆ ನಡೆಸದೆ ಮೌನವಹಿಸಿದ್ದಾರೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ ಆರೋಪಿಸಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದಲಿತ ಮಗು ಮೇಲೆ ಲೈಂಗಿಕ

ಕಡಬ : ತಹಸೀಲ್ದಾರ್ ರಮೇಶ್ ಬಾಬು ಅವರಿಗೆ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ ಹಸನ್ಮುಖಿ ಸೇವೆ ನೀಡಿದಾಗ ಮಾತ್ರ ನಾವು ಮಾಡುವ ಸೇವೆ ಸಾರ್ಥಕವಾಗುತ್ತದೆ ಎಂದು ಕಡಬದಿಂದ ಗುಂಡ್ಲುಪೇಟೆಗೆ ವರ್ಗಾವಣೆಗೊಂಡ ತಹಸೀಲ್ದಾರ್ ಟಿ.ರಮೇಶ್ ಬಾಬು ಹೇಳಿದರು. ಅವರು ಶನಿವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಇಲ್ಲಿ ಸಿಬ್ಬಂದಿಗಳು ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಂದಾಯ ಇಲಾಖೆಗೆ ಸಾರ್ವಜನಿಕರು ತಮ್ಮ

ಮಹಿಳೆಯ ಸ್ನಾನದ ದೃಶ್ಯ ಮೊಬೈಲ್‍ನಲ್ಲಿ ಸೆರೆ ಹಿಡಿದ ಪ್ರಕರಣ – ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸ್ಪಷ್ಟನೆ

ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ , ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡಿದ ಪ್ರಕರಣಕ್ಕೆ ಬಗ್ಗೆ ಮಾತನಾಡಿ, ಪಕ್ಕದ ಮನೆಯ ಮಹಿಳೆಯು ರಾತ್ರಿ 11.30-12 ಗಂಟೆಯ ಸಮಯದಲ್ಲಿ ತನ್ನ ಮನೆಯ ಬಚ್ಚಲಿನಲ್ಲಿ ಸ್ನಾನ ಮಾಡುತಿದ್ದ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ಸ್ಥಳೀಯರು ನೆರೆಮನೆಯ