Home Blog Full WidthPage 196

ಬಂಟ್ವಾಳ – ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ

ಮೂಲಭೂತ ಸೌಕರ್ಯ ವಂಚಿತ ಸರ್ಕಾರಿ ಶಾಲೆ

ಬೆಂಗ್ರೆ: ಬೇಂಗ್ರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಎಸ್.ಐ.ಓ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಬೆಂಗ್ರೆಯ ಶಾಲೆಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಶಾಲೆಯ ಸುತ್ತಮುತ್ತಲಿನ ಜನರು ಮತ್ತು ಆ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪೆÇೀಷಕರು ಭಾಗವಹಿಸಿ ತಮ್ಮ ಮಕ್ಕಳ ಶೈಕ್ಷಣಿಕ ಹಕ್ಕಿನ ಲಭಿಸುವಿಕೆಗೆ ಎಸ್.ಐ.ಓ ಸಂಘಟನೆಯೊಂದಿಗೆ ಜೊತೆಗೂಡಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ

ಹತ್ತಿ ಬಟ್ಟೆ ಸೀರೆ ನೇಯ್ಗೆ ಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ

ಪರಿಣಿತ ಉಡುಪಿ ಸೀರೆ ನೇಕಾರರು ಆಗಿರುವ ಸಂಜೀವ ಶೆಟ್ಟಿಗಾರ್ ರವರಿಗೆ ಹತ್ತಿ ಬಟ್ಟೆ ಸೀರೆ ನೇಯ್ಗೆ ಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ಅವರು ತಾಳಿಪಾಡಿ ನೇಕಾರರ ಸಂಘದ ಸದಸ್ಯರು. ತಾ-07-08-2023 ನೇ ಸೋಮವಾರ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ದಿನ ದಂದು ಬೆಂಗಳೂರಿನಲ್ಲಿ ಅವರು ರಾಜ್ಯ ಪ್ರಶಸ್ತಿ ಸ್ವೀಕರಿಸಲಿದ್ದಾರೆ. 74 ವಯಸ್ಸಿನ ಶ್ರೀ ಸಂಜೀವ ಶೆಟ್ಟಿಗಾರ್ ಈಗ ಇರುವ ಕೇವಲ ಹತ್ತು 80 ಕೌಂಟ್ ನೇಕಾರರಲ್ಲಿ ಒಬ್ಬರು. ಕೈಯಿಂದ ಚಂದದ ಬುಟ್ಟಾ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಯೆಯ್ಯಾಡಿಯಲ್ಲಿ ಪ್ರಚಾರಾಂದೋಲನಾ ಸಭೆ

ಕೇಂದ್ರ ಸರ್ಕಾರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಸಿಐಟಿಯು ನೇತೃತ್ವದಲ್ಲಿ ಆಗಸ್ಟ್ 9ರಂದು ಮಂಗಳೂರಲ್ಲಿ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ನಗರದ ಯೆಯ್ಯಾಡಿಯಲ್ಲಿ ಪ್ರಚಾರಂದೋಲನಾ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ದೇಶದ ಎಲ್ಲ ಸಂಪತ್ತನ್ನು ಅಭಿವೃದ್ಧಿಯ ಹೆಸರಿನಲ್ಲಿ ದೇಶಿ ಮತ್ತು ವಿದೇಶಿ

ಕಾರ್ಕಳ : ಶಾಸಕರ ಸಾಧನೆಗೆ ಪೂರಕವಾದ ದಾಖಲೆಗಳೇ ಇಲ್ಲ: ಶುಭದರಾವ್ ಆರೋಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರ್ ನಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಶಾಸಕರ ಸಾಧನೆಗೆ ಪೂರಕವಾದ ದಾಖಲೆಗಳೇ ಇಲ್ಲ ಎಂದು ಪುರಸಭಾ ಸದಸ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಆರೋಪಿಸಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾರ್ಕಳ ಎರ್ಲಪಾಡಿಯ ಉಮ್ಮಿಕಲ್ ಬೆಟ್ಟದಲ್ಲಿ ಪರಶುರಾಮನ ಪಾರ್ಕ್ ನಿರ್ಮಾಣಗೊಂಡಿರುವ ಜಮೀನು, ಗೋಮಾಳದ

ಪ್ರಧಾನಿ ಮೋದಿ ಹುಟ್ಟುಹಬ್ಬ: 200ಮಂದಿ ದೈವ ದೇವರ ಚಾಕರಿಯವರಿಗೆ ಸನ್ಮಾನ : ಸಂತೋಷ್ ರೈ ಬೋಳಿಯಾರ್ ಹೇಳಿಕೆ

ಉಳ್ಳಾಲ : ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮಂಗಳೂರು ಕ್ಷೇತ್ರ ಬಿಜೆಪಿ ವತಿಯಿಂದ ದೈವ- ದೇವರುಗಳ ಕಾರ್ಯದಲ್ಲಿ ಜೀವನದುದ್ದಕ್ಕೂ ದುಡಿದ ಉಳ್ಳಾಲ ತಾಲೂಕು ವ್ಯಾಪ್ತಿಯ ಕೊಣಾಜೆ ಹಾಗೂ ಇರಾ ಮಹಾಶಕ್ತಿಕೇಂದ್ರದ 12 ಗ್ರಾಮಗಳ 200 ಮಂದಿಗೆ ಅಭಿನಂದನಾ ಕಾರ್ಯಕ್ರಮ ಬೋಳಿಯಾರ್ ನ ಅಮರ್ ದೀಪ ಸಭಾಂಗಣದಲ್ಲಿ ಆ.13 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದ್ದಾರೆ. ಅವರು ಬೋಳಿಯಾರು ಸಭಾಂಗಣದಲ್ಲಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ : ಆಟಿಡೊಂಜಿ ದಿನದ ‘ಆಟಿದ ಅರಗಣೆ’

ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಅರಗಣೆ ” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾಡಿದ ಇವರು ಆಟಿ ತಿಂಗಳಲ್ಲಿ ಆಚರಣೆ ಮಾಡುವ ಆಟಿಡೊಂಜಿ ದಿನವನ್ನು ನಮ್ಮ ಸಂಸ್ಥೆಯಲ್ಲಿ “ಆಟಿದ

ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಚಾಂಪಿಯನ್ ಶಿಪ್‍ಗೆ ರಾಜ್ಯದ ಆಯುಷ್ ಶೆಟ್ಟಿ ಸಾರಥ್ಯ

ಅಮೆರಿಕದಲ್ಲಿ ಸೆಪ್ಟಂಬರ್ 25ರಿಂದ ಆರಂಭವಾಗಲಿರುವ ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ 16 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಆಯುಷ್ ಶೆಟ್ಟಿ ಹಾಗೂ ಉನ್ನತಿ ಹೂಡಾ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ತಂಡವನ್ನು ಮುನ್ನಡೆಸಲಿದ್ದಾರೆ. ಆಟಗಾರರ ಆಯ್ಕೆಗೆ ಜುಲೈ 26ರಿಂದ 29ರ ವರೆಗೆ ಆಯ್ಕೆ ಟ್ರಯಲ್ಸ್ ನಡೆಸಲಾಗಿತ್ತು. ಎರಡು ಬಾರಿ 19 ವಯೋಮಿತಿ ಅಖಿಲ ಭಾರತ ಜ್ಯೂನಿಯರ್ ರ್ಯಾಂಕಿಂಗ್ ಚಾಂಪಿಯನ್ ಆಗಿರುವ

ವೇದಮ್ ಶೈಕ್ಷಣಿಕ ಉತ್ಸವದಲ್ಲಿ ಕಣಚೂರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜರುಗಿದ ವೇದಮ್ ಶೈಕ್ಷಣಿಕ ಉತ್ಸವದಲ್ಲಿ ಕಣಚೂರು ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಟ್ರೆಶರ್ ಹಂಟ್, ಎಸ್ಕೆಪೀಡ್, ಪ್ಯಾಕ್ಮಾನ್, ವಿಭಾಗದಲ್ಲಿ ಹುಮೇರಾ ಆರಿಫ್, ಅಬ್ದುಲ್ ಕರೀಂ ಖತೀಜತುಲ್ ಮಕ್ಸೂದಾ, ರಿಫಾತ್ ಮರಿಯಮ್, ನೂಮನ್ ಷರೀಫ್, ಮುಸ್ಕಾನ್ ಮೊದಲನೇ ಹಾಗೂ ರಿಜ್ವಾನ್ ಮೊಹಮ್ಮದ್ ರಯಾನ್ ಮತ್ತು ಮೊಹಮ್ಮದ್ ಆರೀಫ್ ಎರಡನೇಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಆಗಸ್ಟ್ 13ರಂದು ವಿಟ್ಲ ಯಕ್ಷೋತ್ಸವ ಕಾರ್ಯಕ್ರಮ

ಯಕ್ಷಮಿತ್ರರು-ವಿಟ್ಲ ವಾಟ್ಸಾಪ್ ಬಳಗದವರ ಸಹಕಾರದೊಂದಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜೇಸಿ ಪೆವಿಲಿಯನ್ ಸಭಾಂಗಣದಲ್ಲಿ ಆ.13ರಂದು ಮಧ್ಯಾಹ್ನ ಗಂಟೆ 1.30ರಿಂದ ರಾತ್ರಿ ಎರಡು ಗಂಟೆ ವರೆಗೆ ವಿಟ್ಲ ಯಕ್ಷೋತ್ಸವ ನಡೆಯಲಿದೆ ಎಂದು ಸಂಘಟಕ ಸುಬ್ರಹ್ಮಣ್ಯ ಮುರಾರಿ ಭಟ್ ಪಂಜಿಗದ್ದೆ ತಿಳಿಸಿದರು. ಅವರು ಸೋಮವಾರ ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಗಂಟೆ 1.30ಕ್ಕೆ ತೆಂಕು