Home Blog Full WidthPage 209

MDMA ಹಾಗೂ ಪಿಸ್ತೂಲ್ ಹೊಂದಿದ ಕುಖ್ಯಾತ ಡ್ರಗ್ ಪೆಡ್ಲರ್‍ಗಳ ಸೆರೆ

ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ. ಸುಮಾರು 9ಲಕ್ಷದ ಮೌಲ್ಯದ ಎಂಡಿಎಂಎ ಡ್ರಗ್ಸ್ ಹಾಗೂ ಪಿಸ್ತೂಲ್ , ಡ್ರಾಗನ್ ಚೂರಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದ್ದಾರೆ.

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‍ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಕ್ರಮ ವಹಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಆರೋಪಿಗಳು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು

ಕರುನಾಡ ರತ್ನ ಪ್ರಶಸ್ತಿಗೆ v4 ಸುದ್ದಿ ವಾಹಿನಿಯ ವರದಿಗಾರ ಕೆ.ಎಂ.ಖಲೀಲ್ ಆಯ್ಕೆ

ಕರುನಾಡ ರತ್ನ ಪ್ರಶಸ್ತಿಗೆ ಕೆ.ಎಂ.ಖಲೀಲ್ ಆಯ್ಕೆ ಕಾರ್ಕಳ: ಸುಮಾರು 40 ವರ್ಷಗಳಿಂದ ಛಾಯಾಗ್ರಾಹಕ ಹಾಗೂ ವಿಡಿಯೋ ಗ್ರಾಫರ್ ಆಗಿ ದುಡಿಯುತ್ತಿರುವ ಅದರ ಜೊತೆಗೆ 17 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ v4 ಸುದ್ದಿವಾಹಿನಿಯಕಾರ್ಕಳ ತಾಲೂಕಿನ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಎಂ.ಖಲೀಲ್ ಅವರ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಈ ವರ್ಷದ ಕರುನಾಡ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘಟಕ ಡಾ.ಬಿ.ಎನ್.ಹೊರಪೇಟಿ ತಿಳಿಸಿದ್ದಾರೆ. ಬೆಂಗಳೂರಿನ ಸುಚಿತ್ರ

ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳ ಮಾರಾಟ

ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ಸ್ ಲೇಪಿತ ಚಾಕೊಲೇಟ್‌ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ‘ಬ್ಯಾಂಗ್’ ಚಾಕೊಲೇಟ್‌ಗಳ

ಪುತ್ತೂರು : ದಿ. ಜಯರಾಮ ಗೌಡ ಪೆರ್ಲಂಪಾಡಿ ಅವರಿಗೆ ನುಡಿನಮನ

ಪುತ್ತೂರು ತಾಲೂಕಿನ ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪಾಲ್ತಾಡು ಶಾಖಾ ವ್ಯವಸ್ಥಾಪಕರಾದ ಜಯರಾಮ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನುಡಿನಮನ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಮಾಜಕ್ಕೆ ಸ್ಫೂರ್ತಿಯ ಚಿಲುಮೆಯಾಗಿದ್ದಂತಹ ಜಯರಾಮ ಗೌಡ ಅವರ ಅಗಲಿಕೆ ಇಡೀ ಕುಟುಂಬಕ್ಕೆ, ಬಂಧು ಮಿತ್ರರಿಗೆ ತುಂಬಲಾರದ ನಷ್ಟ. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.

CITU ಸದಸ್ಯರಾದ ಉಮೇಶ್ ಪೂಜಾರಿ ನಿಧನ

ನಿಟ್ಟೆ ಲೆಮಿನಾ ಫೌಂಡ್ರಿ ಸಂಸ್ಥೆಯ ಕಾರ್ಮಿಕರೂ,CITU ಸದಸ್ಯರಾದ ಉಮೇಶ್ ಪೂಜಾರಿಯವರು ತಾ.17-07-2023ರಂದು ರಾತ್ರಿ ಪಾಳಯದಲ್ಲಿ ಕಂಪೆನಿಯಲ್ಲಿ ದುಡಿಯುತ್ತಿದ್ದಾಗ,ಅವಘಡ ಸಂಭವಿಸಿದ್ದು,ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಮನೆಗೆ ತೆರಳಿದ ಉಮೇಶ್ ರವರು ಮಂಗಳವಾರ ದಿನವಿಡೀ ಮನೆಯಲ್ಲಿ ವಿಶ್ರಾಂತಿ ಪಡೆದು ಬುಧವಾರ ಮತ್ತೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗುತ್ತಾರೆ.ಕಾಲಿಗೆ ಸಂಪೂರ್ಣವಾಗಿ ಬ್ಯಾಂಡೇಜ್ ಹಾಕಿದ್ದರಿಂದ

ಬಿಜೆಪಿ ಯುವ ಮೋರ್ಚ ವತಿಯಿಂದ ಸ್ಪೀಕರ್ ವಿರುದ್ಧ ಪ್ರತಿಭಟನೆ

ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವಿರುದ್ಧ ಬಿಜೆಪಿ ಯುವ ಮೋರ್ಚ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ರಾಜ್ಯ ಯುವ ಮೋರ್ಚಾ

ಬಿಗ್ ಸಿನೆಮಾಸ್ ನಲ್ಲಿ “ನಿಮ್ಮೆಲ್ಲರ ಆಶೀರ್ವಾದ” ಪ್ರೀಮಿಯರ್ ಶೋ

ಮಂಗಳೂರು: ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ “ನಿಮ್ಮೆಲ್ಲರ ಆಶೀರ್ವಾದ” ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರು, “ನಿಮ್ಮೆಲ್ಲರ ಆಶೀರ್ವಾದ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಆಗಿದ್ದು ನಾಯಕ ನಟ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ.

3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಸತೀಶ್ ಖಾರ್ವಿ

ಪವರ್ ಲಿಫ್ಟಿಂಗ್‍ನಲ್ಲಿ 3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಹೆಗ್ಗಳಿಕೆ ಪಾತ್ರವಾಗಿರುವ ಅಂತರಾಷ್ಟ್ರೀಯ ಕ್ರೀಡಾಪಟು ಕುಂದಾಪುರ ಸತೀಶ್ ಖಾರ್ವಿ ನೂತನ ದಾಖಲೆ ಮಾಡಿರುವುದನ್ನು ಗುರುತಿಸಿ ಅವರಿಗೆ ಅದ್ದೂರಿ ಸ್ವಾಗತದ ಮೂಲಕ ಬೆಂಗಳೂರಿನಲ್ಲಿ ಕರ್ನಾಟಕ ಗೃಹ ಸಚಿವ ಮಾನ್ಯ ಡಾ.ಜಿ.ಪರಮೇಶ್ವರ್ ಅವರು ಗೌರವದಿಂದ ಅಭಿನಂದಿಸಿದರು. ಸತೀಶ್ ಖಾರ್ವಿ ಅವರು ಮಂಗೋಲಿಯನಲ್ಲಿ ನಡೆಯುವ ಅಂತರಾಷ್ಟ್ರೀಯ ಓಲ್ಡ್ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದು,

“ನಿಮ್ಮೆಲ್ಲರ ಆಶೀರ್ವಾದ” ಚಿತ್ರ ಇದೇ ಶುಕ್ರವಾರ ತೆರೆಗೆ!

ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಳ್ಳೆಯ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ನೀವೆಲ್ಲರೂ ಆಶೀರ್ವಾದ ಮಾಡಿದರೆ ನಾವು ಇನ್ನಷ್ಟು ಹೊಸ