Home Blog Full WidthPage 212

ಬಿಜೆಪಿಯಲ್ಲಿ ಮನೆಯೊಂದು 10 ಬಾಗಿಲು ಎಂಬಂತಾಗಿದೆ : ಮಂಗಳೂರಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಟೀಕೆ

ಬಿಜೆಪಿಯಲ್ಲಿ ಮನೆಯೊಂದು ಬಾಗಿಲು ಹತ್ತು ಎಂಬಂತಾಗಿದೆ. ಯಾರು ಏನು ಮಾತನಾಡುತ್ತಾರೆಂದು ಗೊತ್ತಾಗುತ್ತಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಯನ್ನು ನಿಯಂತ್ರಿಸಲು 56 ಇಂಚಿನ ಎದೆಯವರಿಗೂ ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,

ಉಳ್ಳಾಲ ಬೀಚ್ ಸಮುದ್ರಪಾಲಾಗುತ್ತಿದ್ದ ಯುವಕನ ರಕ್ಷಣೆ

ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಸಮುದ್ರದ ಭಾರೀ ಗಾತ್ರದ ಅಲೆಗಳ ನಡುವೆ ಸಿಲುಕಿದ್ದು, ಪ್ರಾಣಾಪಾಯದಲ್ಲಿದ್ದ ಆತನನ್ನು ಮೊಗವೀರಪಟ್ನದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿರುವ ಘಟನೆ ಇಂದು ಉಳ್ಳಾಲ ಬೀಚ್ ನಲ್ಲಿ ನಡೆದಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಈತನನ್ನು ಮೊಗವೀರಪಟ್ನ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರಾವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್,

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ

ಉಡುಪಿ: ಪ್ರಥಮ ಏಕಾದಶಿ ಪ್ರಯುಕ್ತ ಪೆರ್ಡೂರು ಬ್ರಾಹ್ಮಣ ಸೇವಾ ಸಮಿತಿಯ ವತಿಯಿಂದ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು. ಶ್ರೀ ರಾಘವೇಂದ್ರ ಆಚಾರ್ಯರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ ಸುದರ್ಶನ ಹೋಮ ನಡೆಸಿ, ಪೂರ್ಣಾಹುತಿಯ ನಂತರ ಶೀರೂರು ಮಠದ ಸ್ವಾಮಿಗಳಾದ ಶ್ರೀ ಶ್ರೀ ವೇದದವರ್ಧನ ತೀರ್ಥರು ತಾಮ್ರದಿಂದ ತಯಾರಿಸಿದ ಸುದರ್ಶನ ಹಾಗೂ ಪಾಂಚಜನ್ಯ ಮುದ್ರೆಯನ್ನು, ಅದೇ ಅಗ್ನಿಯಲ್ಲಿ ಕಾಯಿಸಿ ಎಲ್ಲಾ

ಮುಂಬೈ: ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸುವ ಕಲೆ ಯಕ್ಷಗಾನ: ಐಕಳ ಹರೀಶ್ ಶೆಟ್ಟಿ

ಬಂಟರ ಸಂಘ ಮುಂಬಯ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಮೀರಾರೋಡ್ ಪೂರ್ವದ ಠಾಕೂರ್ ಮಾಲ್ ಮತ್ತು ಪ್ರಸಾದ್ ಇಂಟರ್ ನ್ಯಾಶನಲ್ ಹೊಟೇಲ್ ಸಮೀಪದ, ಮಹಾಜನ್ ವಾಡಿಯಲ್ಲಿನ ಭಾರತ ರತ್ನ ಗಾನ ಸಾಮ್ರಾಜ್ಯ ದಿ. ಲತಾ ಮಂಗೇಶ್ಯ ನಾಟ್ಯ ಸಭಾಗೃಹದಲ್ಲಿ ಯಕ್ಷಗಾನ ವೇಷಧಾರಿ ಮಹಾಬಲೇಶ್ವರ ಭಟ್ ಕ್ಯಾದಗಿ, ವಿನೂತನ ಶೈಲಿ. ಪುಷ್ಪಕ ಯಾನ’ ಏಕವ್ಯಕ್ತಿ ನವರಸಾಭಿವ್ಯಕ್ತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನೀಡಿದ ಮಹಾಬಲೇಶ್ವರ ಭಟ್ ಕ್ಯಾದಗಿ ಅವರನ್ನು ಜಾಗತಿಕ

ಮಂಗಳೂರು : ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಜನಸ್ಪಂದನ ಸಭೆ – ಪ್ರಮುಖ ಸಮಸ್ಯೆಗಳ ಬಗ್ಗೆ ಸಭೆಯ ಮುಂದಿಟ್ಟ ಜನತೆ

ಮಂಗಳೂರಿನ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಜನಸ್ಪಂದನೆ ಸಭೆ ನಡೆಯಿತು. ಮಂಗಳೂರಿನ ಪ್ರಮುಖ ಸಮಸ್ಯೆಗಳ ಬಗ್ಗೆ ಜನರು ಮತ್ತು ಸಂಘಟನೆಗಳ ಪ್ರಮುಖರು ಸಭೆಯ ಮುಂದಿಟ್ಟರು.ಉಪಸಾರಿಗೆ ಆಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೋನ್ ಬಿ, ಮಿಸ್ಥಿತ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಯಾವುದೇ ವಿಚಾರದ ದೂರು ಇದ್ದರೆ ಸಾರ್ವಜನಿಕರು ಆರ್‍ಟಿಒ ಕಚೇರಿ ಸಂಪರ್ಕಿಸಿ ದೂರು

ರೋಗರುಜಿನಗಳಿಂದ ರಕ್ಷಣೆಗಾಗಿ ‘ತಪ್ತ ಮುದ್ರಾಧಾರಣೆ’ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮುದ್ರಾಧಾರಣೆಗೆ ಮುಂದಾದ ಭಕ್ತರು

ಉಡುಪಿ: ಮಳೆಗಾಲ ಬಂತು ಅಂದರೆ ನಾನಾ ರೋಗರುಜಿನಗಳ ಆಗಮನವಾಯಿತೆಂದೇ ಅರ್ಥ. ಈ ಸಮಯದಲ್ಲಿ ಒಂದಲ್ಲ ಒಂದು ರೀತಿಯ ರೋಗಕ್ಕೆ ತುತ್ತಾಗುವುದು ಸಾಮಾನ್ಯ. ಆದರೆ ಮಳೆಗಾಲದಲ್ಲಿ ಬರಬಹುದಾದ ರೋಗರುಜಿನಗಳಿಂದ ರಕ್ಷಣೆಯ ಸಲುವಾಗಿ ತಪ್ತ ಮುದ್ರಾಧಾರಣೆ ಮಾಡುವ ಎಂಬ ನಂಬಿಕೆಯಿದೆ. ಮುದ್ರಾಧಾರಣೆಯನ್ನು ಚಾತುರ್ಮಾಸ್ಯದ ಮೊದಲ ದಿನ ಸರ್ವೈಕಾದಶಿಯಂದೇ ನಡೆಸಲಾಗುತ್ತದೆ. ಈ ಸಲುವಾಗಿ ಇಂದು ಉಡುಪಿಯ ಶ್ರೀ ಕೃಷ್ಣ ಮಠ ಹಾಗೂ ಅಷ್ಟಮಠಗಳಲ್ಲಿ ಮುದ್ರಾಧಾರಣೆ ನಡೆಯಿತು. ಮಳೆಗಾಲದ

ಯೆಯ್ಯಾಡಿ : ಕಟ್ಟಡದ ಮೇಲೆ ಬಿದ್ದ ಬೃಹತ್ತಾಕಾರದ ಮರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಕೆಲವೆಡೆ ಹಾನಿ ಸಂಭವಿಸಿದೆ. ಮಂಗಳೂರಿನ ಯೆಯ್ಯಾಡಿ ಜಂಕ್ಷನ್‍ನಲ್ಲಿ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ವಾಣಿಜ್ಯ ಕಟ್ಟಡ ಬಿದ್ದಿದ್ದು, ಸಂಭಾವ್ಯ ಹಾನಿ ತಪ್ಪಿದೆ. ಯೆಯ್ಯಾಡಿಯಿಂದ ಶಕ್ತಿನಗರಕ್ಕೆ ಸಂಪರ್ಕಿಸುವ ರಸ್ತೆ ಇದ್ದಾಗಿದ್ದು, ಇಲ್ಲಿ ದಿನ ನಿತ್ಯ ವಾಹನ ಸಂಚಾರ ಕೂಡ ಇದ್ದು, ಪಾದಚಾರಿಗಳು ಈ ರಸ್ತೆಯನ್ನೆ ಅವಲಂಭಿಸಿದ್ದಾರೆ. ಮರ ಬಿದ್ದ ಪರಿಣಾಮ ದ್ವಿಚಕ್ರವಾಹನ ಜಖಂ ಆಗಿದೆ.

ಉಡುಪಿಯಲ್ಲಿ ಸಂಭ್ರಮದ ಈದ್-ಅಲ್-ಅಧಾ ಆಚರಣೆ

ಉಡುಪಿ : ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಈದ್-ಅಲ್-ಅಧಾ ಆಚರಿಸುತ್ತಿದ್ದು, ಹಲವೆಡೆ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ. ಉಡುಪಿ ನಗರದ ಜುಮಾ ಮಸೀದಿಯಲ್ಲಿ ಸಾಮೂಹಿಕ ನಮಾಝ್, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು. ಇನ್ನೂ ಕೆಲವೆಡೆ ಮಳೆಯ ನಡುವೆ ಪ್ರಾರ್ಥನೆ ಸಲ್ಲಿಸಲಾಗಿದೆ. ಈ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇದನ್ನು

ರಸ್ತೆಯಲೆಲ್ಲಾ ಡೀಸೆಲ್ ಚೆಲ್ಲಿ ವಾಹನ ಸವಾರರ ಪರದಾಟ

ಉಡುಪಿ: ರಸ್ತೆಯಲ್ಲಿ ಡೀಸೆಲ್ ಚೆಲ್ಲಿದ ಪರಿಣಾಮ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಬುಧವಾರ ರಾತ್ರಿ ನಡೆದಿದೆ. ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ಒಂದರಿಂದ ರಸ್ತೆಯ ಮೇಲೆ ಡೀಸೆಲ್ ಚೆಲ್ಲಲ್ಪಟ್ಟಿದೆ. ಈ ವೇಳೆ ಉಡುಪಿಯತ್ತ ತೆರಳುತ್ತಿದ್ದ ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ನಡೆದಿದೆ. ಸುಮಾರು 15ರಿಂದ 20 ರಷ್ಟು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ

ಮೂಡುಬಿದಿರೆ : ಗಾಯಗೊಂಡ ನಾಗರಹಾವಿಗೆ ಶಸ್ತ್ರ ಚಿಕಿತ್ಸೆಯಿಂದ ಮರುಜೀವ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ರಸ್ತೆಯ ಬಳಿ ನಾಗರ ಹಾವೊಂದು ದ್ವಿಚಕ್ರ ವಾಹನದ ಚಕ್ರಕ್ಕೆ ಸಿಲುಕಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿತ್ತು. ಇದನ್ನು ಕಂಡ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದರು. ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾವನ್ನು ಚಿಕಿತ್ಸೆಗಾಗಿ ಉಡುಪಿಯ ವನ್ಯಜೀವಿ ಪಶುವೈದ್ಯ ಡಾ. ಯಶಸ್ವಿಯವರ ಖಾಸಗೀ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿರುತ್ತಾರೆ. ಶಸ್ತ್ರ