Home Blog Full WidthPage 215

ಬಂಟ್ವಾಳ : ಎರಡು ಎಕ್ರೆ ಪ್ರದೇಶದಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿ – ಹೋಟೆಲ್ ಉದ್ಯಮಿಯೊಬ್ಬರ ಸಾಹಸಗಾಥೆ

ಬಂಟ್ವಾಳ: ಜಿಲ್ಲೆಯ ಹವಾಗುಣಕ್ಕೆ ಬೆಳೆ ಹೊಂದಿಕೆಯಾಗುವುದಿಲ್ಲ, ನೀರಾವರಿ ಸಮಸ್ಯೆ, ಅತಿವೃಷಿ, ಅನಾವೃಷಿಯಿಂದಾಗಿ ಉತ್ತಮ ಇಳುವರಿ ಪಡೆಯಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಸಾಕಷ್ಟು ಜಮೀನಿದ್ದರೂ ಕೂಡ ದೊಡ್ಡ ಮಟ್ಟದಲ್ಲಿ ವಿದೇಶಿ ಹಣ್ಣುಗಳನ್ನು ಬೆಳೆಯಲು ಜಿಲ್ಲೆಯ ರೈತರು ನಿರಾಸಕ್ತಿ ತೋರುತ್ತಾರೆ. ಆದರೆ ಬಂಟ್ವಾಳದ ಹೊಟೇಲ್ ಉದ್ಯಮಿಯೊಬ್ಬರು ಸುಮಾರು 2 ಎಕರೆ ಭೂ

ಕದ್ರಿ : ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಮಂಗಳೂರಿನ ಕದ್ರಿ ಸಮೀಪದ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಅಲ್ಲಿದ್ದ ಪ್ರಪಾತದ ಸನಿಹದಲ್ಲೇ ಗಿಡ ಗಂಟಿಗಳ ಮಧ್ಯೆ

ಹೊಂಡ-ಗುಂಡಿಗಳ ಆಗರವಾಗಿರುವ ಬೈಕಂಪಾಡಿ ರಸ್ತೆ

ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಬಹತೇಕ ರಸ್ತೆಗಳು ಹೊಂಡ-ಗುಂಡಿಗಳಿಂದ ಆವೃತ್ತವಾಗಿದೆ. ಇದೀಗ ಬೈಕಂಪಾಡಿ ಇಂಡಸ್ಟ್ರೀಯಲ್ ಪ್ರದೇಶಕ್ಕೆ ಹೋಗುವ ರಸ್ತೆಯ ಪರಿಸ್ಥಿತಿ ಕೂಡ ಹಾಗೆಯೇ ಇದೆ. ಹೊಂಡ-ಗುಂಡಿ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಮಾತ್ರವಲ್ಲದೆ ಅಪಘಾತಗಳು ಸಂಭವಿಸುತ್ತಿದೆ. ಈ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿಯನ್ನು ನೀಡಿದ್ರೂ ಸಹ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಬಗ್ಗೆ

ಖಾಸಗಿ ಬಸ್ಸುಗಳ ದರ್ಬಾರನ್ನು ಕೊನೆಗೊಳಿಸಲು ಜಿಲ್ಲೆಯ ಜನರು ಪ್ರತಿ ಗ್ರಾಮಗಳಿಗೆ ಸರಕಾರಿ ಬಸ್ಸಿನ ಬೇಡಿಕೆ ಸಲ್ಲಿಸಬೇಕು : ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್

ಮಂಗಳೂರು : ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಅವಳಿ ಜಿಲ್ಲೆಯ ಬಡ ಮಹಿಳೆಯರಿಗೂ ಸಿಗುವಂತಾಗಲು ಜಿಲ್ಲೆಯ ಮೂಲೆ ಮೂಲೆಗೂ ಸರಕಾರಿ ಬಸ್ಸು ಓಡಬೇಕು. ವಿಪರ್ಯಾಸ ಎಂದರೆ ಜನರ ತೆರಿಗೆಯ ದುಡ್ಡಿನಿಂದ ಸರಕಾರದ ಸಂಬಳ ಪಡೆಯುವ ಅವಳಿ ಜಿಲ್ಲೆಯ ಸಾರಿಗೆ ಅಧಿಕಾರಿಗಳು ಖಾಸಗಿ ಬಸ್ಸು ಮಾಲಕರ ಅಡಿಯಾಳಂತೆ ವರ್ತಿಸುತ್ತಿರುವ ಅಧಿಕಾರಿಗಳ ಜನವಿರೋಧಿ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷರಾದ

ಸುಳ್ಯದಲ್ಲಿ ಕಾಂಗ್ರೇಸ್ ಬಣಗಳ ನಡುವೆ ವಾಕ್ಸಮರ, ಬಡಿದಾಟ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಅಸಮಾಧಾನ ಸ್ಪೋಟಗೊಂಡು, ಬಡಿದಾಟ ಮಾರಾಮಾರಿ ನಡೆದಿದೆ. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಪರಾಮರ್ಶೆ ಸಭೆಯು ಕಾಂಗ್ರೇಸ್ ಮುಖಂಡರಾದ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಾಯಕರ ಕಾರ್ಯಕರ್ತರ ವಾಕ್ಸಮರ, ಕೈ ಕೈ ಮಿಲಾಯಿಸಿಕೊಳ್ಳವ ರಣರಂಗಕ್ಕೆ ವೇದಿಕೆಯಾಯಿತು. ರಾಜ್ಯದಲ್ಲಿ ಕಾಂಗ್ರೇಸ್ ಅಭೂತಪೂರ್ವ ಗೆಲವು ಸಾಧಿಸಿದರೂ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿನ ಹೀನಾಯ ಸೋಲು

ಹೆಜಮಾಡಿ : ಕ್ರಿಕೆಟ್ ಬೆಟ್ಟಿಂಗ್ ವಿಚಾರದಲ್ಲಿ ಹೊಡೆದಾಟ ಹಲವರಿಗೆ ಗಾಯ

ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಹಲವು ಮಂದಿ ಗಾಯಗೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಕ್ರಿಕೆಟ್ ಬೆಟ್ಟಿಂಗ್ ವಿಚಾರವಾಗಿ ಎರಡು ತಂಡಗಳ ಮಧ್ಯೆ ಮಾರಕಾಯುಧಗಳಿಂದ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಸಂದೇಶ್ ಶೆಟ್ಟಿ ಹಾಗೂ ಸೂರಜ್ ಕ್ರಿಕೆಟ್ ಬೆಟ್ಟಿಂಗ್ ವಿಚಾರದಲ್ಲಿ ಪರಸ್ಪರ ರೋಷದಿಂದ ಬೈದಾಡಿಕೊಂಡ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂದೇಶ್ ಶೆಟ್ಟಿ ಮತ್ತಿತರರು ಕಾರಿನಲ್ಲಿ ಬಂದು

ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ಸರ್ಕಸ್ ತುಳು ಸಿನಿಮಾ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ

ಯಶಸ್ವೀ ಪ್ರದರ್ಶನಗಳನ್ನು ಕಾಣುತ್ತಿರುವ ಸರ್ಕಸ್ ಸಿನಿಮಾ ಇದೀಗ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ವಿವಿಧ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಎಲ್ಲಾ ಮಕ್ಕಳು ಉತ್ಸಾಹದಿಂದಲೇ ಸರ್ಕಸ್ ಸಿನಿಮಾ ವೀಕ್ಷಿಸಿದರು. ದೇಶ ವಿದೇಶ ಮತ್ತು ಕರಾವಳಿಯಲ್ಲಿ ಸರ್ಕ್‍ಸ್ ಸಿನಿಮಾ ಹೌಸ್‍ಫುಲ್ ಪ್ರದರ್ಶನಗಳನ್ನು ಕಾಣುತ್ತಿದೆ. ಸಿನಿಮಾ ಪ್ರೇಕ್ಷಕರು ಸಿನಿಮಾ ವೀಕ್ಷಿಸಿ

ಇಸ್ರೋ ಚಂದ್ರಯಾನ-3 ನೌಕೆ ಉಡಾವಣೆ ಯಶಸ್ವಿ

ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ವಿಶೇಷತೆಗಳನ್ನು ನೋಡುವುದಾದರೆ, ಲ್ಯಾಂಡರ್​, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್​​-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ. ಚಂದ್ರಯಾನ-3 ಯೋಜನೆಗೆ 630 ಕೋಟಿ ರೂ. ಆಗಿರುವ ವೆಚ್ಚ ತಗುಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಗಸ್ಟ್ ಅಂತ್ಯದ ವೇಳೆಗೆ ಚಂದ್ರಯಾನ -3 ಮಿಷನ್ ಅನ್ನು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ

ತಿಮಿಂಗಲದ ಅಂಬರ್‌ಗ್ರೀಸ್ ಎಂದು ಹೇಳಿ ಮಾರಾಟಕ್ಕೆ ಯತ್ನ : ಮೂವರು ಆರೋಪಿಗಳ ಬಂಧನ

ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್‌ಗ್ರಿಸ್ ಎಂದು ಹೇಳಿ 10 ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ ಘಟನೆ ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್‌ಗ್ರಿಸ್ ಎಂದು ಹೇಳಿ 10ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಶಿವಮೊಗ್ಗ

ಮೂಡುಬಿದರೆ : ಜೈನ ಮುನಿಯ ಹತ್ಯೆ ಪ್ರಕರಣ, ಜೈನ ಸಮುದಾಯದಿಂದ ಪ್ರತಿಭಟನೆ

ಬೆಳಗಾಂ ಜಿಲ್ಲೆಯ ಚಿಕ್ಕೋಡಿ ಹಿರೇಕೊಡಿಯ ಪರಮಪೂಜ್ಯ ಆಚಾರ್ಯ 108 ಶ್ರೀ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆಯನ್ನು ಖಂಡಿಸಿ ಕಾನೂನು ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಜೈನ ಸಮಾಜದ ಮುನಿ ಸಂತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಮೂಡುಬಿದಿರೆಯ ಸಮಸ್ತ ಜೈನ ಸಮುದಾಯದ ಬಾಂಧವರು ತಹಶೀಲ್ದಾರ್ ಮೂಲಕ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೂ ಮೊದಲು ಸಾವಿರ ಕಂಬದ ಬಸದಿಯಲ್ಲಿ ಖಂಡನಾ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ