Home Blog Full WidthPage 456

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ; ಮಾ.5 ರಿಂದ 13 ರವರೆಗೆ ಬ್ರಹ್ಮಕಲಶ ಮತ್ತು ಜಾತ್ರಾ ಮಹೋತ್ಸವ

ಚಿತ್ರಾಪುರ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಚಿತ್ರಾಪುರ ಇಲ್ಲಿನ ಜೀರ್ಣೋದ್ಧಾರಕ್ಕೆ ಸರ್ವ ಭಕ್ತರು ಕೈ ಜೋಡಿಸಿ ದೇವಸ್ಥಾನವನ್ನು ಐತಿಹಾಸಿಕವಾಗಿ ಬೆಳಗಿಸಿ ಶ್ರೀ ದೇವಿಯ ಆಶೀರ್ವಾದ ಪಡೆಯುವಂತಾಗಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬ್ರಹ್ಮಕಲಶಾಧಿ ದಾರ್ಮಿಕ ಸೇವಾ

ಕಾಂತಾರ ಸಿನಿಮಾ ತಂಡಕ್ಕೆ ಕೋರ್ಟಿನಲ್ಲಿ ಗೆಲುವು ; ತೈಕ್ಕುಡಂ ತಕರಾರು ಅರ್ಜಿ ವಜಾ

ಕಾಂತಾರ ಸಿನಿಮಾದ ವರಾಹರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ವರಾಹಂ ರೂಪಂ ಹಾಡು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಜಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು, ತೈಕ್ಕುಡಂ ಬ್ರಿಡ್ಜ್ ಹಾಕಿದ್ದ ಅರ್ಜಿಯನ್ನೇ ವಜಾ ಮಾಡಿದೆ. ಕಾಂತಾರ ಸಿನಿಮಾ ದೇಶಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತೈಕ್ಕುಡಂ ಬ್ರಿಡ್ಜ್ ತಂಡದವರು ವರಾಹಂ ರೂಪಂ ಹಾಡಿನ ಬಗ್ಗೆ

ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಮಹಾಸಭೆ

ದಕ್ಷಿಣ ಕನ್ನಡ ಜಿಲ್ಲಾ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಆಶ್ರಯದಲ್ಲಿ ಜನ ಸಂಪರ್ಕ ಹಾಗೂ ಸರ್ವ ಸದಸ್ಯರ ಮಹಾಸಭೆಯನ್ನು ನವೆಂಬರ್ 27ರಂದು ನಗರದ ಡಾನ್ ಬಾಸ್ಕೋ ಹಾಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಮೇಕ್ಸಿಂ ಡಿಸಿಲ್ವ ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಬೇಡಿಕೆ, ಮುಂದಿನ ಕಾರ್ಯತಂತ್ರಗಳ ರೂಪಿಸುವಿಕೆ ಹಾಗೂ ವೇದಿಕೆಯ ಕಾನೂನು ಸಲಹೆ

ಸಮಾಜದಲ್ಲಿ ಭೀತಿ ಮೂಡಿಸುವ ಚಟುವಟಿಕೆ ಮಟ್ಟ ಹಾಕುತ್ತೇವೆ -ಸಚಿವ ಸುನೀಲ್ ಕುಮಾರ್

ಸಮಾಜದಲ್ಲಿ ಭೀತಿ ಮೂಡಿಸುವ ಎಲ್ಲಾ ಚಟುವಟಿಕೆಗಳನ್ನು ಮಟ್ಟ ಹಾಕುತ್ತೇವೆ. ಆಗಿರುವ ಘಟನೆಗಳ ನೋಡಿದರೆ ಅವರ ಉದ್ದೇಶ ಸ್ಪಷ್ಟವಾಗಿದೆ ಎಂದು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಕುಕ್ಕರ್ ಬಾಂಬ್ ಸ್ಪೋಟಗೊಂಡ ನಾಗುರಿ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಹಿಂದು ಸಮಾಜವನ್ನು ಗುರಿಯಾಗಿಸಲಾಗಿದೆ. ಅವರ ಷಡ್ಯಂತ್ರವನ್ನು ಮಟ್ಟ ಹಾಕುತ್ತೇವೆ. ಎನ್‍ಐಎಗೆ ಶೀಘ್ರವಾಗಿ ಪ್ರಕರಣ ಹಸ್ತಾಂತರ ಆಗಲಿದ್ದು, ಇಡೀ ಪ್ರಕರಣದ ಆಳ ಅಗಲ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ;ಆಟೋ ಚಾಲಕನ ಆರೋಗ್ಯ ವಿಚಾರಿಸಿದ ಸಚಿವ ಸುನೀಲ್ ಕುಮಾರ್

ಮಂಗಳೂರು ಸಮೀಪದ ನಾಗೂರಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕ ಉಜ್ಜೋಡಿ ನಿವಾಸಿ ಪುರುಷೋತ್ತಮರವರನ್ನು ಮಾನ್ಯ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ತೆರಳಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು ಹಾಗೂ ಕುಟುಂಬದವರಿಗೆ ಧೈರ್ಯ ತುಂಬಲಾಯಿತು..

ಧರ್ಮಸ್ಥಳದ ಖಾವಂದರಿಗೆ 75ರ ಸಂಭ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್‌ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ

ಡಿ.1ರಿಂದ ಆಟೊ ರಿಕ್ಷಾಗಳ ಪ್ರಯಾಣ ದರ ಹೆಚ್ಚಳ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಡಿ.1ರಿಂದ ಅನ್ವಯಗೊಳ್ಳುವಂತೆ ಪರಿಷ್ಕರಿಸಿ ದ.ಕ ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶ ಹೊರಡಿಸಿದ್ದಾರೆ. ಕನಿಷ್ಟ ದರ ಮೊದಲ ಒಂದುವರೆ ಕಿ.ಮೀ.ಗೆ 35 ರೂ., ನಂತರದ ಪ್ರತೀ 1 ಕಿ.ಮೀ. 20 ರೂ. ಆಗಿರುತ್ತದೆ. ಮೊದಲ 15 ನಿಮಿಷಗಳವರೆಗೆ ಕಾಯುವ ದರವಿರುವುದಿಲ್ಲ. ಅದು ಉಚಿತವಾಗಿರುತ್ತದೆ.ಬಳಿಕದ 15 ನಿಮಿಷಕ್ಕೆ 5 ರೂ.

ಕಸದ ಗುಂಡಿಯಲ್ಲಿ 2 ದಿನದ ಮಗು ಪತ್ತೆ

ಬೆಳಗಾವಿ: ಎರಡು ದಿನದ ಹಸುಗೂಸನ್ನು ಬಾಸ್ಕೆಟ್​ನಲ್ಲಿ ಹಾಕಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಿಟ್ಟು ಹೋದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಕೆಎಲ್‌ಇ ಸ್ಕೂಲ್ ಬಳಿ ನಡೆದಿದೆ. ಕೇವಲ 2 ದಿನದ ‌ಹಸುಗೂಸನ್ನು ಗುಂಡಿಯಲ್ಲಿ ಬಿಸಾಡಿ ಹೋಗಿದ್ದಾರೆ. ಸದ್ಯ ರಸ್ತೆ ಪಕ್ಕದ ಗುಂಡಿಯಲ್ಲಿದ್ದ ಮಗುವನ್ನ ಸ್ಥಳೀಯರು ರಕ್ಷಿಸಿ ಆಸ್ಪತ್ರಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ನಿಪ್ಪಾಣಿ ನಗರ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಆಯ್ಕೆ.

ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು. ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ

ADGP ಅಲೋಕ್​ ಕುಮಾರ್​ಗೆ ಬೆದರಿಕೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹಿಂದೆ ಉಗ್ರರ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ಸ್ಫೋಟ ಪ್ರಕರಣದ ಇಡೀ ದೇಶದಾದ್ಯಂತ ಸದ್ದು ಮಾಡುತ್ತಿದೆ. ಇದರ ಮಧ್ಯೆ ಇದೀಗ ಆರೋಪಿ ಶಾರೀಕ್​​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​ ಮಾಧ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಮತ್ತೊಂದು ದಾಳಿಯ ಎಚ್ಚರಿಕೆ ನೀಡಿದೆ. ಇನ್ನು ಈ ಹೇಳಿಕೆಯಲ್ಲಿ ಎಡಿಜಿಪಿ